Saturday, October 12, 2024

Latest Posts

‘ಇನ್ನು 4 ವರ್ಷ ಕುಮಾರಸ್ವಾಮಿಯವ್ರೇ ಸಿಎಂ’

- Advertisement -

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್‌ -ಕಾಂಗ್ರೆಸ್‌ ಸಮ್ಮಿಶ್ರ ಸರಕಾರ ಇನ್ನೂ 4 ವರ್ಷ ಸದೃಢವಾಗಿರಲಿದ್ದು, ಪೂರ್ಣಾವಧಿಗೆ ಎಚ್‌.ಡಿ.ಕುಮಾರಸ್ವಾಮಿಯವ್ರೇ ಸಿಎಂ ಅಂತ ಡಿಸಿಎಂ ಡಾ.ಜಿ.ಪರಮೇಶ್ವರ್‌ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. 

”ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕೆನ್ನೋ ವಿಚಾರ ಸದ್ಯಕ್ಕೆ ಅಪ್ರಸ್ತುತ.5 ವರ್ಷಗಳಿಗೆ ಕುಮಾರಸ್ವಾಮಿ ಅವರೇ ಸಿಎಂ ಅಂತ ಎಐಸಿಸಿ ಹೈಕಮಾಂಡ್‌ ತೀರ್ಮಾನಿಸಿದೆ. ಹೀಗಾಗಿ ಯಾವುದೇ ಬದಲಾವಣೆ ಇಲ್ಲ” ಎಂದು ಉಭಯ ನಾಯಕರು ಸ್ಪಷ್ಟನೆ ನೀಡಿದರು. ಸಿಎಂ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಿನ್ನೆ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ್ರು.

- Advertisement -

Latest Posts

Don't Miss