Saturday, March 2, 2024

Latest Posts

ಡಿಕೆ ಶಿವಕುಮಾರ್ ಬಾಯಿಗೆ ಬೀಗ ಹಾಕಿದ್ಯಾರು..?

- Advertisement -

ಮಂಡ್ಯ : ಕಾಂಗ್ರೆಸ್ ನಾಯಕರು ಬಾಯಿಗೆ ಹಾಕಿದ್ಯಾರು ಅನ್ನೋದಕ್ಕೆ ಉತ್ತರ ಸಿಕ್ಕಿದೆ. ಯಾಕಂದ್ರೆ ಮೈತ್ರಿ ಪಕ್ಷದ ವಿರುದ್ಧವೇ ಮಾತನಾಡುತ್ತಿದ್ದ ನಾಯಕರು ಈಗ ಸೈಲೆಂಟ್ ಆಗಿದ್ದಾರೆ. ಈಗ ಕೈ ನಾಯಕರ ಸೈಲೆಂಟ್ ರಹಸ್ಯವನ್ನ ಡಿಕೆಶಿ ಬಿಚ್ಚಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ಬಾಯಿಮುಚ್ಚಿಕೊಂಡು ಇದ್ದೇನೆ ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ತಿಳಿಸಿದರು.ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರ ಬಗ್ಗೆ ಮಾತನಾಡಲು ನಿರಾಕರಿಸಿ, ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಬಾರದು ಎಂಬ ಹಿನ್ನೆಲೆಯಲ್ಲಿ ಬಾಯಿಗೆ ಪ್ಲಾಸ್ಟರ್ ಹಾಕಿಕೊಂಡಿದ್ದೇನೆ. ನೀವು ಕೂಡ ಒಂದು ಪ್ಲಾಸ್ಟರ್ ಕೊಟ್ಟರೆ ಅದನ್ನು ಹಾಕಿಕೊಳ್ಳುತ್ತೇನೆ ಎಂದು ತಮಾಷೆ ಮಾಡಿದರು.

ರಾಮುಲು ಅಣ್ಣನಿಗೆ ಮುಂದೆ ಉತ್ತರ ಕೊಡ್ತೇನೆ..!

ಡಿಕೆ.ಶಿವಕುಮಾರ್ ಎಲ್ಲಿದ್ದೀಯಪ್ಪ ಎಂಬ ಬಗ್ಗೆ ಟ್ವೀಟ್ ಮಾಡಿದ್ದಾರೆ ಹಾಗೂ ಸರ್ಕಾರ ಪತನವಾಗಲು ಕಾರಣ ಎಂದು ತಿಳಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ಶ್ರೀರಾಮುಲು ಅಣ್ಣನವರಿಗೆ ಮುಂದೆ ಉತ್ತರ ನೀಡುತ್ತೇನೆ ಎಂದು ತಿಳಿಸಿದರು.

ನೀರು ಹರಿಸುವ ಅಧಿಕಾರ ನಮಗಿಲ್ಲ – ಡಿಕೆಶಿ

ಮಂಡ್ಯ ಜಿಲ್ಲೆಯಲ್ಲಿ ಬೆಳೆಗಳಿಗೆ ನೀರು ವರಿಸುವಂತೆ ರೈತ ಸಂಘ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದೆ. ಆದರೆ ಕಾವೇರಿ ನದಿ ನೀರನ್ನು ಹರಿಸುವ ಅಧಿಕಾರ ನಮ್ಮ ಅಧಿಕಾರಿಗಳಿಗೆ ಇಲ್ಲ. ಈ ಬಗ್ಗೆ ಜೂನ್ 25ರಂದು ಸಭೆ ಕರೆದಿದ್ದು, ಈ ಸಂಬಂಧವಾಗಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು. ಕಳೆದ ತಿಂಗಳು ತಮಿಳುನಾಡಿಗೆ ಹರಿಸಬೇಕಾದ ನೀರನ್ನು ಮಳೆ ಕೊರತೆಯಿಂದ ನೀರು ಹರಿಸಿಲ್ಲ. ಹಿನ್ನೆಲೆಯಲ್ಲಿ ಆ ಭಾಗದ ರೈತರು ಅಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ ಹಾಗೂ ಇಲ್ಲಿ ನಮ್ಮ ರೈತರು ನೀರು ಬೇಕು ಎಂದು ಒತ್ತಾಯ ಮಾಡುತ್ತಿರುವುದರಿಂದ ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ರೈತರು ಮೊದಲಿನಂತೆ ಇಷ್ಟ ಬಂದ ರೀತಿಯಲ್ಲಿ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ ಇದಕ್ಕೆ ಪ್ರಮುಖ ಕಾರಣ ಮಳೆಯ ಕೊರತೆ . ಕಟ್ಟೆಯಲ್ಲಿರುವ ನೀರನ್ನು ಕುಡಿಯಲು ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಟಿವಿ, ಮಂಡ್ಯ

ಕುಮಾರಸ್ವಾಮಿ ಸರ್ಕಾರ ಇನ್ನು ಎಷ್ಟು ದಿನ ಇರುತ್ತೆ..?

- Advertisement -

Latest Posts

Don't Miss