Saturday, July 27, 2024

Latest Posts

ದ್ವೇಷದ ಭಾಷಣಕ್ಕಾಗಿ ನರಸಿಂಹಾನoದ ಯತಿ ಬಂಧನ

- Advertisement -

ನರಸಿಂಹಾನoದ ಯತಿ ಒಂದಲ್ಲಾ ಒಂದು ವಿವಾದಾತ್ಮಕ ಹೇಳಿಕೆಗಳನ್ನು ಮತ್ತು ಕಾರ್ಯಗಳನ್ನು ಮಾಡುತ್ತಲೇ ಇರುತ್ತಾರೆ. ಈ ನಿಟ್ಟಿನಲ್ಲಿ ಅವರನ್ನು ದ್ವೇಷದ ಭಾಷಣ ಆರೋಪದ ಮೇಲೆ ಬಂಧಿಸಲಾಗಿದೆ. ಹರಿದ್ವಾರದಲ್ಲಿ ಕಳೆದ ತಿಂಗಳು ಮುಸ್ಲಿಮರ ನರಮೇಧಕ್ಕೆ ಕರೆನೀಡುವ ಕಾರ್ಯಕ್ರಮವನ್ನು ಆಯೋಜಿಸಿದ್ದ ಯತಿ ನರಸಿಂಹಾನoದ ಅವರನ್ನು ಇದೀಗ ಧರ್ಮ ಸಂಸದ್ ಭಾಷಣ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯರ ಬಗ್ಗೆಯೂ ಸಹ ಆಕ್ಷೇಪಾರ್ಹ ಹೇಳಿಕೆ ನೀಡಿದ್ದವಿಚಾರಕ್ಕಾಗಿ ಶನಿವಾರ ಅವರನ್ನು ಬಂಧಿಸಲಾಗಿತ್ತು. ಭಾನುವಾರ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಜೊತೆಗೆ ಸಂಸದ್ ದ್ವೇಷ ಭಾಷಣ ಪ್ರಕರಣವನ್ನು ಉಲ್ಲೇಖಿಸಲಾಗಿದೆ. ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest Posts

Don't Miss