Saturday, July 20, 2024

Latest Posts

ಪೃಥ್ವಿ ಅಂಬರ್ – ಮಿಲನಾ ನಾಗರಾಜ್ ಅಭಿನಯದ “F0R REGN”  ಚಿತ್ರೀಕರಣ ಮುಕ್ತಾಯ ಹಂತದಲ್ಲಿ

- Advertisement -

 

2020ರ ಸೂಪರ್ ಹಿಟ್ ಚಿತ್ರಗಳಾದ “ದಿಯಾ” ಹಾಗೂ “ಲವ್ ಮಾಕ್ಟೇಲ್” ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ‌.

ಮೇ 24 ರಂದು ನಿರ್ದೇಶಕ ನವೀನ್ ದ್ವಾರಕನಾಥ್ ಅವರ ಹುಟ್ಟುಹಬ್ಬ. ಆ ಸಂಭ್ರಮಕ್ಕಾಗಿ ಚಿತ್ರತಂಡ ಮೇಕಿಂಗ್ ವಿಡಿಯೋ ಬಿಡುಗಡೆ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ. ಚಿತ್ರತಂಡದ ಈ ಪ್ರೀತಿಗೆ ಸಂತಸಪಟ್ಟಿರುವ ನಿರ್ದೇಶಕ ನವೀನ್ ದ್ವಾರಕನಾಥ್, ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾಗಿದ್ದ ಈ ಚಿತ್ರದ ಫಸ್ಟ್ ಲುಕ್ ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ನಿಶ್ಚಲ್ ಫಿಲಂಸ್ ಮೂಲಕ
ಎನ್ .ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನವೀನ್ ದ್ವಾರಕನಾಥ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಆರ್.ಕೆ.ಹರೀಶ್ ಸಂಗೀತ ನಿರ್ದೇಶನ, ಅಭಿಷೇಕ್ ಕಲ್ಲತ್ತಿ ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿರುವ ಈ ಚಿತ್ರದ ಕಾರ್ಯಕಾರ ನಿರ್ಮಾಪಕರಾಗಿ ನಿರಂಜನ್ ರಾಧಾಕೃಷ್ಣ ಇದ್ದಾರೆ.

 

- Advertisement -

Latest Posts

Don't Miss