- Advertisement -
ನವದೆಹಲಿ : ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಕರ್ನಾಟಕದ ಏಕೈಕ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಬುಧವಾರ ಭೇಟಿ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು. ಕರ್ನಾಟಕದಲ್ಲಿ ಪಕ್ಷದ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನಯ್ ಕಾರ್ತಿಕ್ ಹಾಜರಿದ್ದರು.
ಡಿಕೆಶಿ ಶುಭಕೋರೊದ ನಂತರ ಮಾಜಿ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಹುಟ್ಟು ಹಬ್ನದ ಶುಭಾಶಯ ಕೋರಿದರು. ಮಾಜಿ ಶಾಸಕರಾದ ಅಶೋಕ್ ಪಟ್ಟಣ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್ ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -