Tuesday, April 22, 2025

Latest Posts

“ವರದ” ಚಿತ್ರದ ಲಿರಿಕಲ್ ಹಾಡು ಬಿಡುಗಡೆ ಮಾಡಿ ಶುಭಕೋರಿದ ನೆನಪಿರಲಿ ಪ್ರೇಮ್

- Advertisement -

ವಿನೋದ್ ಪ್ರಭಾಕರ್ ನಾಯಕರ ಗಾಗಿ ನಟಿಸಿರುವ “ವರದ” ಚಿತ್ರಕ್ಕಾಗಿ ನಂದೀಶ್ ಬರೆದಿರುವ “ತುಟಿಯು ಹಾಡುತಿದೆ” ಎಂಬ ಹಾಡನ್ನು ನಟ ನೆನಪಿರಲಿ ಪ್ರೇಮ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಆರ್ ಜೆ ರಾಪಿಡ್ ರಶ್ಮಿ ಈ ಹಾಡನ್ನು ಹಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ಫೆಬ್ರವರಿ 18ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

ಕೆ.ಕಲ್ಯಾಣ್ , ನಂದೀಶ್ ಹಾಗೂ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವಿನಾಯಕರಾಮ್ ಸಂಭಾಷಣೆ ಬರೆದಿದ್ದಾರೆ. ಭಜರಂಗಿ ಆನಂದ್ ಛಾಯಾಗ್ರಹಣ, ವೆಂಕಿ ಯು ಡಿ ವಿ ಸಂಕಲನ, ಕಂಬಿ ರಾಜು ನೃತ್ಯ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ, ವಿಕ್ರಂ ಮೋರ್(ಕೆ ಜಿ ಎಫ್), ಅಶ್ರಫ್ ಗುರ್ಕಲ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ವಿನೋದ್ ಪ್ರಭಾಕರ್ ಅವರ ತಂದೆ ಪಾತ್ರದಲ್ಲಿ ಹಿರಿಯ ನಟ ಚರಣ್ ರಾಜ್ ನಟಿಸಿದ್ದಾರೆ. ಅಮಿತ ಈ ಚಿತ್ರದ ನಾಯಕಿ. ಅನಿಲ್ ಸಿದ್ದು, ಎಂ.ಕೆ.ಮಠ, ಅಶ್ವಿನಿ ಗೌಡ, ಗಿರೀಶ್ ಜತ್ತಿ, ಪ್ರಶಾಂತ್ ಸಿದ್ದಿ, ರಾಧ ರಂಗನಾಥ್, ರಾಜೇಶ್ವರಿ, ದುರ್ಗ, ಮಾನಸ, ಅರವಿಂದ್, ರೋಬೊ ಗಣೇಶ್, ಲೋಕೇಶ್, ನಮನ, ರಾಮಸ್ವಾಮಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

- Advertisement -

Latest Posts

Don't Miss