- Advertisement -
ಫ್ರಾನ್ಸ್ನಿಂದ ತರಿಸಿಕೊಳ್ಳಲಾದ 5 ರಫೇಲ್ ಯುದ್ಧ ವಿಮಾನಗಳು ಭಾರತದ ವಾಯು ಸೇನೆಗೆ ಇಂದು ಅಧಿಕೃತವಾಗಿ ಸೇರ್ಪಡೆಯಾಗಿವೆ. ಈ ಮೂಲಕ ಭಾರತೀಯ ವಾಯು ಸೇನೆಗೆ ಆನೆ ಬಲ ಬಂದಂತಾಗಿದೆ.

ಅಂಬಾಲ ವಾಯುನೆಲೆಯಲ್ಲಿ ನಡೆದ ಸಮಾರಂಭದಲ್ಲಿ ರಫೇಲ್ ಯುದ್ಧ ವಿಮಾನಗಳು ಭಾರತೀಯ ವಾಯುಸೇನೆಗೆ ಸೇರ್ಪಡೆಯಾದವು. ಇನ್ನು ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಫ್ರಾನ್ಸ್ ರಕ್ಷಣಾ ಸಚಿವ ಫ್ಲೊರೆನ್ಸ್ ಪಾರ್ಲಿ, ವಾಯುಪಡೆ ಮುಖ್ಯಸ್ಥ ಮಾರ್ಷಲ್ ಭದೌರಿಯಾ, ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ಸೇರಿದಂತೆ ಹಲವು ಉಪಸ್ಥಿತರಿದ್ದರು.

- Advertisement -