ಕಾಂತಾರ ಸಿನಿಮಾ ಯಶಸ್ಸಿನ ಬೆನ್ನಲ್ಲೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ ದಂಪತಿ

ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಸದ್ದು ಮಾಡುತ್ತಿದ್ದು, ಚಿತ್ರದ ಕ್ರೇಜ್ ಇನ್ನಷ್ಟು ಹೆಚ್ಚುತ್ತಿದೆ. ಸಾಮಾನ್ಯ ಪ್ರೇಕ್ಷಕರಲ್ಲದೆ ಸೆಲೆಬ್ರೆಟಿಗಳೂ ಸಹ ಸಿನಿಮಾವನ್ನು ಚಿತ್ರಮಂದಿರಕ್ಕೆ ಬಂದು ವೀಕ್ಷಿಸುತ್ತಿದ್ದಾರೆ. ವಿವಿಧ ಸಿನಿಮಾ ರಂಗದ ನಟರು, ರಾಜಕೀಯ ನಾಯಕರು ಎಲ್ಲ ರಂಗದವರು ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇಡೀ ದೇಶವೇ ಚಿತ್ರದತ್ತ ಗಮನ ಸೆಳೆಯುವಂತೆ ಮಾಡಿದ ರಿಷಬ್ ಶೆಟ್ಟಿ ಪತ್ನಿ ಜೊತೆ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಮಂಜುನಾಥನ ಆಶೀರ್ವಾದ ಪಡೆದಿದ್ದಾರೆ. ದರ್ಶನದ ನಂತರ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ.

ಕಾಂತಾರ ಚಿತ್ರವನ್ನು ಮಾಡುವ ಮೊದಲು ರಿಷಬ್ ಶೆಟ್ಟಿ ಧರ್ಮಸ್ಥಳಕ್ಕೆ ಬಂದು ಆಶೀರ್ವಾದ ಪಡೆದಿದ್ದರು. ಚಿತ್ರೀಕರಣ ಮಾಡುವ ಮೊದಲು ಶ್ರೀ ಮಂಜುನಾಥನ ಮತ್ತು ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಅನುಮತಿ ಪಡೆದು ಚಿತ್ರೀಕರಣಕ್ಕೆ ಮುಂದಾಗಿದ್ದರು.

‘ಕಾಂತಾರ’ ವೀಕ್ಷಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಆಂಜನೇಯನ ಜನ್ಮಸ್ಥಳಕ್ಕೆ ಭೇಟಿ ನೀಡಿದ ಏರ್ ಮಾರ್ಷಲ್ ಮಾನವೇಂದ್ರ ಸಿಂಗ್

ಕಾಂಗ್ರೆಸ್ ನಾಯಕ ಮುದ್ದುಹನುಮೇಗೌಡ, ನಟ ಶಶಿಕುಮಾರ್ ಬಿಜೆಪಿಗೆ ಸೇರ್ಪಡೆ

About The Author