- Advertisement -
ಬೆಂಗಳೂರು, ನ.25. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಜೆಪಿನಗರದಲ್ಲಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ ಭೇಟಿ ನೀಡಿ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ಕೋರಿದರು.
ಸಂಸದೆ ಸುಮಲತಾ ಅಂಬರೀಶ್ ಅವರ ಆಶೀರ್ವಾದ ಪಡೆದ ಬೂಕಹಳ್ಳಿ ಮಂಜು ಅವರು, ವಿಧಾನ ಪರಿಷತ್ ಚುನಾವಣೆ ನನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದರು.
- Advertisement -