Belagavi News: ಬೆಳಗಾವಿ: ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 1.96 ಕೋಟಿ ಭಕ್ತರ ಕಾಣಿಕೆ ಸಂಗ್ರಹವಾಗಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮನ ದೇವಸ್ಥಾನದಲ್ಲಿ ಕಳೆದ 50 ದಿನಗಳ ಅಂತರದಲ್ಲಿ ಇಷ್ಟು ದೇಣಿಗೆ ಸಂಗ್ರಹವಾಗಿದೆ. ಏಪ್ರಿಲ್ 1ರಿಂದ ಮೇ 20ರ ಅವಧಿಯಲ್ಲಿ ಭಕ್ತರು ಹಾಕಿದ್ದ ಭಕ್ತರ ಕಾಣಿಕೆ ಎಣಿಕೆ ಬುಧುವಾರ ರಾತ್ರಿ ಮುಕ್ತಾಯವಾಗಿದ್ದು, 50ದಿನಗಳಲ್ಲಿ ಒಟ್ಟು ₹1.96 ಕೋಟಿ ಕಾಣಿಕೆ ಸಂಗ್ರಹವಾಗಿದೆ.
ಅದರಲ್ಲಿ ₹1.71 ಕೋಟಿ ನಗದು, ₹20.44 ಲಕ್ಷ ಮೌಲ್ಯದ ಚಿನ್ನಾಭರಣ, ₹4.44 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ. ಇನ್ನು ಶಕ್ತಿಯೋಜನೆ ಜಾರಿಗೆ ಬಂದ ಬಳಿಕ, ಹೆಣ್ಣು ಮಕ್ಕಳು, ಮಹಿಳಾ ಭಕ್ತರು ಯಲ್ಲಮ್ಮ ಗುಡ್ಡಕ್ಕೆ ಹೆಚ್ಚಾಗಿ ಬರುತ್ತಿದ್ದು, ಈ ಕಾರಣಕ್ಕಾಗಿ ದಾಖಲೆ ಪ್ರಮಾಣದಲ್ಲಿ ದೇಣಿಗೆ ಸಂಗ್ರಹವಾಗಿದೆ ಎಂದು, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಪಿ.ಬಿ. ಮಹೇಶ್ ಮಾಹಿತಿ ನೀಡಿದ್ದಾರೆ.