Friday, September 12, 2025

Latest Posts

1 ತಿಂಗಳು ಭಾರೀ ಮಳೆ | ಹವಾಮಾನ ಇಲಾಖೆ ರೆಡ್ ಅಲರ್ಟ್!

- Advertisement -

ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆ ಮತ್ತೊಮ್ಮೆ ತನ್ನ ಆರ್ಭಟವನ್ನು ತೋರಿಸಲು ಸಜ್ಜಾಗಿದೆ. ಆದರೇ, ಭಾರತೀಯ ಹವಾಮಾನ ಇಲಾಖೆ ಸೆಪ್ಟಂಬರ್ 11 ರಿಂದ ಸೆಪ್ಟೆಂಬರ್ 15ರವರೆಗೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ವಿಜ್ಞಾನಿ ಸಿಎಸ್ ಪಾಟೀಲ್ ಲಯನ್ ಟಿವಿಗೆ ತಿಳಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಎಂದರೇ 65-115 ಮಿಮೀ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ಇದೆ. ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಕೆಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಮತ್ತು ಕೆಲವು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಸೆಪ್ಟಂಬರ್ 13ರಿಂದ ಒಂದು ತಿಂಗಳ ಕಾಲ ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯ ರೆಡ್ ಅಲರ್ಟ್ ಮುನ್ಸೂಚನೆಯಿದೆ. ಈ ಎಚ್ಚರಿಕೆಯು 115 ಮಿಮೀಗಿಂತ ಹೆಚ್ಚಿನ ಭಾರೀ ಮಳೆಯ ಸಾಧ್ಯತೆಯನ್ನು ಸೂಚಿಸುತ್ತದೆ. ಜೋರು ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ರೈತರು, ಸಾರ್ವಜನಿಕರು ಮತ್ತು ಸ್ಥಳೀಯ ಆಡಳಿತವು ಸಂಭವನೀಯ ನೆರೆ, ಭೂಕುಸಿತ ಮತ್ತು ಇತರ ತೊಂದರೆಗಳು ಎದುರಾಬಹುದು ಎಂದು ಅಂದಾಜಿಸಲಾಗಿದೆ. ಗಾಳಿಯ ವೇಗವು 40-50 ಕಿಮೀ/ಗಂಟೆಯವರೆಗೆ ಇರಬಹುದು, ಇದರಿಂದ ಮರಗಳು ಒಡೆಯುವುದು, ವಿದ್ಯುತ್ ಕಂಬಗಳಿಗೆ ಹಾನಿಯಾಗುವುದು ಮತ್ತು ರಸ್ತೆ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ.

ಒಡಿಶಾ ಮತ್ತು ಆಂಧ್ರಪ್ರದೇಶದ ಕರಾವಳಿಯ ಸಮೀಪ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಚಲನೆ ಇದೆ. ಈ ಚಂಡಮಾರುತದ ತೀವ್ರತೆಯಿಂದಾಗಿ ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವು 30 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿರುವ ಸಾಧ್ಯತೆ ಇದ್ದು, ಕನಿಷ್ಠ ತಾಪಮಾನವು 20-21 ಡಿಗ್ರಿ ಸೆಲ್ಸಿಯಸ್‌ನಷ್ಟಿರಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದಿಂದ ತಿಳಿದುಬಂದಿದೆ. ನಗರದಲ್ಲಿ ಮೋಡ ಕವಿದ ವಾತಾವರಣವಿರಬಹುದಾದರೂ, ಭಾರೀ ಮಳೆಯ ಸಾಧ್ಯತೆ ಕಡಿಮೆಯಿದೆ.

- Advertisement -

Latest Posts

Don't Miss