Sunday, April 13, 2025

Latest Posts

ಸಿಎಂ ಪರಿಹಾರ ನಿಧಿಯಿಂದ ಮಳವಳ್ಳಿ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಹಸ್ತಾಂತರ ..

- Advertisement -

ಮಂಡ್ಯ: ಮಳವಳ್ಳಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿರುವ ಬಾಲಕಿ ಕುಟುಂಬದವರಿಗೆ  ಸರ್ಕಾರದಿಂದ  ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ರೂ ಪರಿಹಾರ ಮಂಜೂರು ಮಾಡಲಾಗಿದ್ದು, ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ.ಕೆ ಅವರು  ‌ಇಂದು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿ ಸಾಂತ್ವನ ಹೇಳಿದರು..

ಮಾನ್ಯ ಮುಖ್ಯಮಂತ್ರಿಗಳು ಕುಂಭ ಮೇಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಬಾಲಕಿಯ ಮೇಲೆ ನಡೆದಿರುವುದು‌ ಅಮಾನುಷ ಕೃತ್ಯವಾಗಿದ್ದು, ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ ಮಂಜೂರು ಮಾಡುವಂತೆ ಮನವಿ ಮಾಡಿದ್ದರು, ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಪರಿಹಾರ ಘೋಷಿಸಿದರು.

ಇದೇ ಸಂದರ್ಭದಲ್ಲಿ ಸಂಸದೆ ಸುಮಲತಾ ಅಂಬರೀಷ್, ಶಾಸಕ ಡಾ.ಕೆ.ಅನ್ನದಾನಿ,ಜಿಲ್ಲಾಧಿಕಾರಿ ಎಸ್.ಅಶ್ವತಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ತಹಶೀಲ್ದಾರ್ ವಿಜಿಯಣ್ಣ ಸೇರಿದಂತೆ ಇತರರು ಹಾಜರಿದ್ದರು.

- Advertisement -

Latest Posts

Don't Miss