www.karnatakatv.net: ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ನಮ್ಮ ಮೆಟ್ರೋಗೆ 10 ವರ್ಷ ಪೂರೈಸಿದ್ದಕ್ಕೆ ಪ್ರಯಾಣಿಕರಿಗೆ ಮತ್ತು ಮೆಟ್ರೋಗೆ ಭೂಮಿ ನೀಡಿದವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
ನಮ್ಮ ಮೆಟ್ರೋ ಸಂಚಾರಕ್ಕೆ 10 ವರ್ಷ ಪೂರ್ಣಗೊಂಡಿದೆ. 2011 ಅ.20 ರಂದು ಹಳಿಗೆ ಇಳಿದಿದ್ದ ನಮ್ಮ ಮೇಟ್ರೋ ರೈಲು ಇವತ್ತಿಗೆ 10 ವರ್ಷ ಪೂರ್ಣಗೊಂಡಿದೆ, ಎಂ.ಜಿ. ರಸ್ತೆಯಿಂದ ಬೈಯ್ಯಪ್ಪನ ಹಳ್ಳಿವರೆಗೆ ಮೊದಲಿಗೆ ಮೆಟ್ರೋ ಸಂಚಾರ ಆರಂಭ ಆಗಿತ್ತು. 6 ಕಿ.ಮೀ. ಮಾರ್ಗದಲ್ಲಿ ಮೊದಲ ಬಾರಿಗೆ ಮೆಟ್ರೋ ಸಂಚರಿಸಿತ್ತು. ಆದ್ರೆ ಈಗ 56 ಕಿ.ಮೀ ನಮ್ಮ ಮೆಟ್ರೋ ಸಂಚಾರ ನಡೆಸುತ್ತಿದೆ. ಇದನ್ನು 175 ಕಿ.ಮೀ ವಿಸ್ತರಿಸಬೇಕೆಂಬುದಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆಯಂತೆ 2024ರ ಡಿಸೆಂಬರ್ ವೇಳೆಗೆ ಈ ಮೆಟ್ರೋ ಕಾಮಗಾರಿ ಪೂರ್ಣ ಆಗಲಿದೆ. 175 ಕಿ.ಮೀ. ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ ಎಂದು ಬಿಎಂಆರ್ ಸಿಎಲ್ ಎಂಡಿ ಅಂಜುo ಪರ್ವೇಜ್ ಹೇಳಿದ್ದಾರೆ.
ನಮ್ಮ ಮೆಟ್ರೋ ಯೋಜನೆಯ ಎರಡನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ನೀಡಲಾಗಿದ್ದ 2025ರ ಗಡುವನ್ನು ಮಾರ್ಪಡಿಸಿ, 2024 ಕ್ಕೆ ನಿಗದಿ ಪಡಿಸುವಂತೆ ಹಾಗೂ ಇದಕ್ಕೆ ತಕ್ಕ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಮೊದಲು ಸೂಚನೆ ನೀಡಿದ್ದರು. ಇದು ಪೂರ್ಣಗೊಳ್ಳುತ್ತಿದ್ದಂತೆಯೇ ಮೂರನೇ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.