Political News: ಇಂದು ಕಾಂಗ್ರೆಸ್ ಸರ್ಕಾರ, ವಿಧಾನಸೌಧದಲ್ಲಿ 100 ಹೊಸ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳಿಗೆ ಚಾಲನೆ ನೀಡಿದೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ ವರ್ಷ ಏಪ್ರಿಲ್ ವೇಳೆಗೆ, ಬಿಎಂಟಿಸಿಗೆ 1400 ಎಲೆಕ್ಟ್ರಿಕ್ ಬಸ್‌ಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ.
ಇಲ್ಲಿಯವರೆಗೂ ರಾಜ್ಯ ಸಾರಿಗೆ ಬಸ್‌ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಪ್ರತಿದಿನ ಬಿಎಂಟಿಸಿಯಲ್ಲಿ 40 ಲಕ್ಷ ಜನ ಪ್ರಯಾಣ ಮಾಡುತ್ತಾರೆ. ಇದರಲ್ಲಿ ಯಾವುದೇ ಬೇಧ ಭಾವವಿಲ್ಲದೇ, ಬಡ, ಶ್ರೀಮಂತ, ಜಾತಿ-ಬೇಧವಿಲ್ಲದೇ, ಎಲ್ಲ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ ಎಂದರು.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ನಗರದ ಮಾಲಿನ್ಯ ನಿಯಂತ್ರಣಕ್ಕೆ ಇಂದು ನೂರು ಹೊಸ ಎಲೆಕ್ಟ್ರಿಕ್ ಬಸ್‌ಗಳಿಗೆ ಚಾಲನೆ ನೀಡಿದ್ದು, ಮುಂದೆ ದೇಶದಲ್ಲೇ ಅತಿ ಹೆಚ್ಚು ಎಲೆಕ್ಟ್ರಿಕ್ ಬಸ್‌ಗಳನ್ನು ಹೊಂದುವ ಮೂಲಕ ಹೊಸ ಮೈಲಿಗಲ್ಲು ತಲುಪಲು ಪಣತೊಟ್ಟಿದ್ದೇವೆ. ನಮ್ಮ ಸರ್ಕಾರದ ಶಕ್ತಿ ಯೋಜನೆ ಇಂದು ದೇಶಕ್ಕೆ ಮಾದರಿಯಾಗಿದ್ದು, ಬೇರೆ ರಾಜ್ಯಗಳು ಇದನ್ನು ಅನುಸರಿಸುವಂತಾಗಿದೆ. ಇದು ರಾಜ್ಯದ ಸಾರಿಗೆ ಇಲಾಖೆಯ ಹಿರಿಮೆಯನ್ನು ಹೆಚ್ಚಿಸಿದೆ.
ಅತ್ಯಾಧುನಿಕ ಗುಣಮಟ್ಟದ ಈ ಎಲೆಕ್ಟ್ರಿಕ್ ಬಸ್ಗಳು ಹೊಗೆ ರಹಿತ ಹಾಗೂ ಪರಿಸರ ಸ್ನೇಹಿಯಾಗಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ ಹಲವು ವಿಶೇಷ ಸೌಲಭ್ಯಗಳನ್ನು ಹೊಂದಿದೆ. ಮೊದಲ ಹಂತದಲ್ಲಿ ನೂರು ಇವಿ ಬಸ್ಗಳು ನಗರದಲ್ಲಿ ಸಂಚಾರ ಮಾಡಲಿದ್ದು, ಮುಂದೆ ಇದನ್ನು ಹೆಚ್ಚಿಸುವ ಗುರಿ ಹೊಂದಿದ್ದೇವೆ ಎಂದರು.
ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿಗಳೊಂದಿಗೆ ನೂರು ಹೊಸ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳಿಗೆ ಚಾಲನೆ ನೀಡಿ, ಮಾತನಾಡಿದೆ. ನಗರದ ಮಾಲಿನ್ಯ ನಿಯಂತ್ರಣಕ್ಕೆ ಇಂದು ನೂರು ಹೊಸ ಎಲೆಕ್ಟ್ರಿಕ್ ಬಸ್‌ಗಳಿಗೆ ಚಾಲನೆ ನೀಡಿದ್ದು, ಮುಂದೆ ದೇಶದಲ್ಲೇ ಅತಿ ಹೆಚ್ಚು ಎಲೆಕ್ಟ್ರಿಕ್ ಬಸ್‌ಗಳನ್ನು ಹೊಂದುವ ಮೂಲಕ ಹೊಸ ಮೈಲಿಗಲ್ಲು ತಲುಪಲು ಪಣತೊಟ್ಟಿದ್ದೇವೆ.… pic.twitter.com/DiqQjhtEUC
— DK Shivakumar (@DKShivakumar) December 26, 2023




