Friday, July 25, 2025

Latest Posts

ಡಿ.ದೇವರಾಜ್ ಅರಸ್ ಅವರ 106 ನೇ ಜನ್ಮದಿನಾಚರಣೆ

- Advertisement -

www.karnatakatv.net : ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿಯೂ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ..ದೇವರಾಜ್ ಅರಸ್ ಅವರ 106 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯ್ತು.

ಚಾಮರಾಜನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಜನ್ಮದಿನಾಚರಣಾ ಕಾರ್ಯಕ್ರಮವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ, ಕೇಂದ್ರ ಪರಿಹಾರ ನಿಗಮದ ರಾಜ್ಯಾದ್ಯಕ್ಷ ಎಂ.ರಾಮಚಂದ್ರ ಅವರು ದೇವರಾಜೇ ಅರಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು.

ಈ ವೇಳೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲ್ಲೂಕುವಾರು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿದ್ರು.

ಈ ವೇಳೆ ಮಾತನಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ, ಹಿಂದುಳಿದ ವರ್ಗಗಳ ಹರಿಹಾರ ಅರಸು ಅವರ ಆದರ್ಶ ಮತ್ತು ತತ್ವಗಳನ್ನು ಇಂದಿನ ರಾಜಕೀಯ ಜನಪ್ರತಿನಿಧಿಗಳು ಮೈಗೂಡಿಸಿಕೊಂಡು ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕೆಂದು ಸಲಹೆ ನೀಡಿದ್ರು… ಇತ್ತ ಗುಂಡ್ಲುಪೇಟೆಯಲ್ಲೂ ಸಹ ಸರಳವಾಗಿ ಆಚರಣೆ ಮಾಡಲಾಯಿತು…

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ಶಾಂತರಾಜು, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಸಿಇಓ ಹರ್ಷಲ್ ಬೋಯರ್ ನಾರಾಯಣ್, ಹೆಚ್ಚಿವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜು, ನಗರಸಭಾ ಆಯುಕ್ತ ಕರಿಬಸವಯ್ಯ, ರೇವಣ್ಣ, ಮುಖ್ಯ ಸಂಭಾಷಣಾಕಾರ ಗೋವಿಂದರಾಜು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು

ಕರ್ನಾಟಕ ಟಿವಿ ಚಾಮರಾಜನಗರ

- Advertisement -

Latest Posts

Don't Miss