Hubli News: ಹುಬ್ಬಳ್ಳಿ : ಕಟ್ಟಡ ಕಾರ್ಮಿಕರಲ್ಲದೆಯು ನೋಂದಣಿ ಮಾಡಿಕೊಂಡ ಧಾರವಾಡ ಜಿಲ್ಲೆಯ 10,780 ಮಂದಿಯನ್ನು ಪತ್ತೆ ಮಾಡಿ, ಅವರಿಗೆ ನೀಡಿದ್ದ ಕಾರ್ಮಿಕ ಕಾರ್ಡ್‌ಗಳನ್ನು ಕಾರ್ಮಿಕ ಇಲಾಖೆ ರದ್ದು ಮಾಡಿದೆ.
ಕಾರ್ಮಿಕರೆಂದು ಸುಳ್ಳು ಮಾಹಿತಿ ನೀಡಿ, ಕೆಲವರು ನೋಂದಾಯಿಸಿಕೊಂಡಿದ್ದು ಪರಿಶೀಲನೆ ವೇಳೆ ಪತ್ತೆಯಾಗಿದೆ. ಅವರು ಸರ್ಕಾರದ ಯೋಜನೆಗಳನ್ನು ಪಡೆಯುವ ಮುನ್ನವೇ ಕಾರ್ಮಿಕ ಕಾರ್ಡ್ ರದ್ದು ಮಾಡಲಾಗಿದೆ ಎಂದು ಸಹಾಯಕ ಕಾರ್ಮಿಕ ಆಯುಕ್ತರು ಮಾಹಿತಿ ನೀಡಿದ್ದಾರೆ.
ಕಟ್ಟಡ ಕಾರ್ಮಿಕರಿಗಾಗಿ ಇಲಾಖೆಯಿಂದ ಹಲವಾರು ಉಪಯುಕ್ತ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಇವು ಅರ್ಹರಿಗೆ ಸಿಗಬೇಕೆಂದು ಇಲಾಖೆ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಇಷ್ಟರ ನಡುವೆಯೂ, ಕೆಲವರು ಸುಳ್ಳು ಮಾಹಿತಿ ನೀಡಿ, ಕಟ್ಟಡ ಕಾರ್ಮಿಕರೆಂದು ನೋಂದಣಿ ಮಾಡಿಕೊಂಡಿದ್ದಾರೆ. ಸ್ಥಳ ಪರಿಶೀಲನೆ, ದೂರವಾಣಿ ಮೂಲಕ ನಡೆಸಿದ ವಿಚಾರಣೆ ವೇಳೆ ಇವರು ಕಾರ್ಮಿಕರಲ್ಲವೆಂದು ತಿಳಿದುಬಂದಿದೆ. ಒಂದು ವೇಳೆ, ಇವರು ಸರ್ಕಾರದಿಂದ ಅನುಕೂಲ ಪಡೆದ ಫಲಾನುಭವಿಗಳಾಗಿದ್ದರೆ, ಎಫ್‌ಐಆರ್ ದಾಖಲಿಸಲಾಗುತ್ತಿತ್ತು. ಅವರು ಪಡೆದ ನೆರವನ್ನು ವಾಪಸ್ ಪಡೆಯುವ ಅವಕಾಶವೂ ಇದೆ ಎಂದು ವಿವರಿಸಿದರು.
ಕಟ್ಟಡ ಕಾರ್ಮಿಕರು ಈ ಹಿಂದೆ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗಾಗಿ ಅರ್ಜಿ ಸಲ್ಲಿಸಬೇಕಿತ್ತು. ಈಗ ಕಾರ್ಮಿಕ ಇಲಾಖೆಗಾಗಿಯೇ ಹೊಸ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲಾಗಿದೆ. ಮೂರು ತಿಂಗಳಿಂದ ಇದು ಕಾರ್ಯನಿರ್ವಹಿಸುತ್ತಿದೆ. ಇನ್ಮುಂದೆ ಯಾರಾದರೂ ಕಾರ್ಮಿಕರೆಂದು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದರೆ, ಅವರ ಆಧಾರ್ ಕಾರ್ಡ್ ಮಾಹಿತಿ ದಾಖಲಿಸಿ, ಮತ್ತೊಮ್ಮೆ ಅರ್ಜಿ ಸಲ್ಲಿಸದಂತೆ ತಡೆಹಿಡಿಯಬಹುದು.
ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ: ಬಸವರಾಜ್ ಬೊಮ್ಮಾಯಿ
ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನಸೌಧ ಬಿಟ್ಟು ತೊಲಗಿ: ಬಿಜೆಪಿ ನಾಯಕರ ಆಕ್ರೋಶ
ಪಾಕ್ ಪರ ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ