Sunday, September 8, 2024

Latest Posts

10 ಮತ್ತು 12ನೇ ತರಗತಿಯ ಫಲಿತಾಂಶ ಪ್ರಕಟ

- Advertisement -

www.karnatakatv.net : ಭಾರತಿಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 10 ನೇ ಮತ್ತು 12 ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಿದ್ದು, 12ನೇ ತರಗತಿಯಲ್ಲಿ ಶೇ 0.2ರಷ್ಟು ಅಂತರದಿಂದ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಕಳೆದ ವರ್ಷದಂತೆಯೇ ಈ ಬಾರಿಯೂ ಮೆರಿಟ್ ಲಿಸ್ಟ್ ಇಲ್ಲ ಎಂದು ಮಂಡಳಿ ತಿಳಿಸಿದೆ. ಕೋವಿಡ್ ಸಾಂಕ್ರಾಮಿಕದ ಕಾರಣ ಈ ವರ್ಷ 10 ಮತ್ತು 12ನೇ ತರಗತಿ ಪರೀಕ್ಷೆ ರದ್ದುಗೊಳಿಸಲಾಗಿತ್ತು. ಪರ್ಯಾಯ ಮೌಲ್ಯಮಾಪನ ನೀತಿಯ ಆಧಾರದಲ್ಲಿ ಫಲಿತಾಂಶ ನಿರ್ಧರಿಸಲಾಗಿದೆ.

10ನೇ ತರಗತಿಯಲ್ಲಿ ಬಾಲಕಿಯರು ಮತ್ತು ಬಾಲಕರು ಸೇರಿ ತೇರ್ಗಡೆ ಪ್ರಮಾಣ ಶೇ 99.98 ಇದೆ. 12ನೇ ತರಗತಿಯಲ್ಲಿ ಬಾಲಕಿಯರ ತೇರ್ಗಡೆ ಪ್ರಮಾಣ ಶೇ 99.86 ಇದ್ದು, ಬಾಲಕರ ತೇರ್ಗಡೆ ಪ್ರಮಾಣ ಶೇ 99.66 ಇದೆ’ ಎಂದು ಸಿಐಎಸ್‌ಸಿಇ ಮುಖ್ಯ ಕಾರ್ಯನಿರ್ವಾಹಕ ಮತ್ತು ಕಾರ್ಯದರ್ಶಿ ಗೆರ್ರಿ ಅರಾಥೂನ್ ತಿಳಿಸಿದ್ದಾರೆ.

- Advertisement -

Latest Posts

Don't Miss