- Advertisement -
www.karnatakatv.net :ಬೆಳಗಾವಿ: ನಗರದಲ್ಲಿ 11 ದಿನಗಳ ಗಣೇಶೋತ್ಸವ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ ಅಂತ ಶಾಸಕ ಅಭಯ ಪಾಟೀಲ್ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನ ತಾವು ಭೇಟಿಯಾಗಿದ್ದು, 11 ದಿನಗಳ ಕಾಲ ಬೆಳಗಾವಿಯಲ್ಲಿ ಗಣೇಶೋತ್ಸವ ಆಚರಿಸೋದಕ್ಕೆ ಮುಖ್ಯಮಂತ್ರಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಅಂತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆಗೊಳಿಸೋ ಮೂಲಕ ಶಾಸಕ ಅಭಯ್ ಪಾಟೀಲ್ ತಿಳಿಸಿದ್ದಾರೆ. ಈ ಗಣೇಶ ಚತುರ್ಥಿಯ ಸಂಭ್ರಮದಲ್ಲಿರುವ ಬೆಳಗಾವಿಗರಿಗೆ ಶುಭ ಸುದ್ದಿ ನೀಡಿದ್ದಾರೆ.
ನಾಗೇಶ್ ಕುಂಬಳಿ, ಕರ್ನಾಟಕ ಟಿವಿ- ಬೆಳಗಾವಿ
- Advertisement -