Saturday, June 14, 2025

Latest Posts

ಬೆಂಗಳೂರಿನಲ್ಲಿ 11 ಆರ್‌ಸಿಬಿ ಅಭಿಮಾನಿಗಳ ಸಾ*ವು: 50ಕ್ಕೂ ಹೆಚ್ಚು ಜನ ಅಸ್ವಸ್ಥ

- Advertisement -

Bengaluru: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಪಿ ಐಪಿಎಲ್‌ನಲ್ಲಿ ಕಪ್ ಗೆದ್ದಿದ್ದಕ್ಕೆ ಸಂಭ್ರಮಾಚರಣೆ ಆಚರಿಸಲಾಗುತ್ತಿತ್ತು. ಹೀಗಾಗಿ ಆರ್‌ಸಿಬಿ ಆಟಗಾರರು ಅಲ್ಲಿ ಮೆರವಣಿಗೆ ಮೂಲಕ ಸನ್ಮಾನ ಕಾರ್ಯಕ್ರಮಕ್ಕೆ ಬಂದಿದ್ದರು. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದು, ಗೇಟ್-6ನಲ್ಲಿ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. 6 ವರ್ಷದ ಮಗು ಕೂಡ ಮೃತಪಟ್ಟಿರುವುದು ದುಃಖಕರ ಸಂಗತಿ.

ಅಸ್ವಸ್ಥಗ“ಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದೇಹಿ ಆಸ್ಪತ್ರೆಯಲ್ಲೂ ಹಲವರನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ, ವೈದೇಹಿ ಆಸ್ಪತ್ರೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇನ್ನು ಹಲವರ ಸ್ಥಿತಿ ಗಂಭೀರವಾಗಿದೆ.

ಇನ್ನು ಘಟನೆ ನಡೆದಿದ್ದು ಹೇಗೆ ಎನ್ನುವುದನ್ನು ನೋಡುವುದಾದರೆ, ಕ್ರೀಡಾಂಗಣದ ಬಳಿ ಇರುವ ಮಾರ್ಗದಲ್ಲಿ ಜನಜಂಗುಳಿ ಇದ್ದು, ವಾಹನ ಸಂಚರಿಸಲು ಸಾಧ್ಯವಾಗದೇ ಇದ್ದಾಗ, ಪೋಲೀಸರು ಅವರನ್ನು ಜರುಗಿಸಲು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ.

- Advertisement -

Latest Posts

Don't Miss