ಚಿಕ್ಕಬಳ್ಳಾಪುರ: ಖಾಸಗಿ ಬಸ್ ಮತ್ತು ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭಿವಿಸಿದ ಪರಿಣಾಮ 12 ಮಂದಿ ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ಚಿಂತಾಮಣಿಯಲ್ಲಿ ನಡೆದಿದೆ.
ಇಲ್ಲಿನ ಇತಿಹಾಸ ಪ್ರಸಿದ್ಧ ಮುರುಗಮಲ್ಲ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮುರುಗಮಲ್ಲದಿಂದ ಚಿಂತಾಮಣಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಎದುರಿನಿಂದ ಬಂದ ಟಾಟಾ ಏಸ್ ಗೆ ಟಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಾಟಾ ಏಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು,ವಾಹನದಲ್ಲಿದ್ದ 12 ಮಂದಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಇನ್ನೂ ಹತ್ತಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು ಚಿಂತಾಮಣಿ, ಕೋಲಾರ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಇನ್ನು ಈ ಅಪಘಾತಕ್ಕೆ ಖಾಸಗಿ ಬಸ್ ನ ಅತಿಯಾದ ವೇಗವೇ ಕಾರಣ ಅಂತ ಹೇಳಲಾಗ್ತಿದೆ. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.
ರೈತರ ಪರ ಮಂಡ್ಯ ಸಂಸದೆ ಸುಮಲತಾ ಮಾತು..!ಮಿಸ್ ಮಾಡದೇ ಈ ವಿಡಿಯೋ ನೋಡಿ