- Advertisement -
ಹಾಸನ: ರಾಜ್ಯದ ಮತ್ತೊಂದು ಶಾಲೆಯಲ್ಲಿ ಕೊರೋನಾ ಸ್ಫೋಟವಾಗಿದೆ. ಹಾಸನದ ವಸತಿ ಶಾಲೆಯಲ್ಲಿ 13 ಮಕ್ಕಳಿಗೆ ಪಾಸಿಟಿವ್ ಬಂದಿದೆ.
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟವಾಗಿದೆ. ಆರೋಗ್ಯ ಇಲಾಖೆಯಿಂದ ಶಾಲೆಯ 200 ಮಕ್ಕಳಿಗೆ ಟೆಸ್ಟ್ ಮಾಡಿಸಿದ್ದು, ಈಗಾಗ್ಲೇ 13 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ವಿದ್ಯಾರ್ಥಿಗಳು, ಪೋಷಕರು ಭಾರೀ ಆತಂಕದಲ್ಲಿದ್ದಾರೆ. ಇನ್ನು ಈ ಬಗ್ಗೆ ಚನ್ನರಾಯಪಟ್ಟಣ ಆರೋಗ್ಯಾಧಿಕಾರಿಗಳಿಂದ ಮಾಹಿತಿ ನೀಡಿದ್ದಾರೆ.
- Advertisement -