Hubballi News: ಹುಬ್ಬಳ್ಳಿ: ಕೈಗೆಟಕುವ ದರದಲ್ಲಿ ನಿವೇಶನ ಕೊಡಿಸುವುದಾಗಿ ಭರವಸೆ ನೀಡಿದ ಅಪರಿಚಿತ ವ್ಯಕ್ತಿಯೊಬ್ಬ, ನಗರದ ಪೊಲೀಸರೊಬ್ಬರಿಂದ 14.38 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದರ ಕುರಿತು ಸಿಇಎನ್ ಕ್ರೖೆಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಜುನಾಥ ಮಳಿಮಠ ವಂಚನೆಗೊಳಗಾದವರು. ಮಂಜುನಾಥರನ್ನು ಸಂರ್ಪಸಿದ ವ್ಯಕ್ತಿಯೊಬ್ಬ ಸಂತೋಷ ಹಾವೇರಿಶೆಟ್ಟರ್ ಎಂದು ಪರಿಚಯಿಸಿಕೊಂಡಿದ್ದಾನೆ. ನಗರದಲ್ಲಿ ಕೈಗೆಟಕುವ ದರದಲ್ಲಿ ನಿವೇಶನ ಕೊಡಿಸುವುದಾಗಿ ನಂಬಿಸಿದ್ದಾನೆ. ಈ ಮಾತು ನಂಬಿದ ಮಂಜುನಾಥ, ತಮ್ಮ ಬ್ಯಾಂಕ್ ಖಾತೆಯಿಂದ 6 ಲಕ್ಷ ರೂ. ಹಾಗೂ ಯುಪಿಐ ಮೂಲಕ 8.38 ಲಕ್ಷ ರೂ. ವರ್ಗಾಯಿಸಿ ವಂಚನೆಗೊಳಗಾಗಿದ್ದಾನೆ.
ಮಾಜಿ ಸಚಿವ ಹೆಚ್.ಡಿ.ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು, ನಾಯಕರಿಂದ ಪ್ರೊಟೆಸ್ಟ್
ಹಾಸನ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಕರವೇ ಒತ್ತಾಯ
ರಾಷ್ಟ್ರ ನಿರ್ಮಾತೃ ಪ್ರಶಸ್ತಿ ಪಡೆದ ವಿದ್ಯಾರ್ಥಿ ಸ್ನೇಹಿ ಶಿಕ್ಷಕ ನಾಗಭೂಷಣ್