ಬೆಂಗಳೂರು: ಇನ್ನೇನು ಕೆಲವೇ ಹೊತ್ತಿನಲ್ಲಿ ವಿಶ್ವಾಸಮತ ಯಾಚನೆ ಪೂರ್ಣಗೊಳ್ಳಲಿದೆ ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬದಲಾಗೋ ಎಲ್ಲಾ ಲಕ್ಷಣಗಳೂ ಈಗಾಗಲೇ ಗೋಚರಿಸುತ್ತಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ರಾಜ್ಯ ಸಮ್ಮಿಶ್ರ ಸರ್ಕಾರದ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಸಾಬೀತುಪಡಿಸಲು ಇನ್ನೇನು ಕೆಲ ಹೊತ್ತಲ್ಲೇ ನೆಡಯಲಿದೆ. ಹೀಗಾಗಿ ಈಗಾಗಲೇ ಪಕ್ಷೇತರ ಶಾಸಕರಿಗಾಗಿ ಕಾಂಗ್ರೆಸ್-ಬಿಜೆಪಿ ಕುಸ್ತಿ ಬಳಿಕ ಆಡಿದ ಬೀದಿ ಜಗಳದ ಬೆನ್ನಲ್ಲೇ ಇದೀಗ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಇಂದಿನಿಂದ 2 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಇಂದು ಸಂಜೆ 6 ಗಂಟೆಯಿಂದ 48 ಗಂಟೆ ಕಾಲ, ಅಂದರೆ ಇಂದು ಸಂಜೆ 6 ಗಂಟೆಯಿಂದ ಜುಲೈ 25ರ ಸಂಜೆ 6 ಗಂಟೆವರೆಗೆ 48 ಗಂಟೆಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಅಂತ ಹೇಳಿದ್ರು. ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ರಾಜಕೀಯ ಪಕ್ಷಗಳ ಬೆಂಬಲಿಗರು, ಮುಖಂಡರು ಬೆಂಗಳೂರಿನ ನಾನಾ ಕಡೆ ಪ್ರತಿಭಟನೆ ನಡೆಸುವ ಸಾಧ್ಯತೆಯಿದ್ದು ಮುಂಜಾಗೃತಾ ಕ್ರಮವಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ.