ಮಂಡ್ಯ: ಕೆಆರ್ ಪೇಟೆ ಕ್ಷೇತ್ರದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ದುರಸ್ತಿಗೆ 15 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರು, ಸ್ಥಳೀಯ ಶಾಸಕರೂ ಆದ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ಈ ವರ್ಷ ಸುರಿದ ಭಾರಿ ಮಳೆಗೆ ಕೆಆರ್ ಪೇಟೆ ತಾಲೂಕು ವ್ಯಾಪ್ತಿಯಲ್ಲಿ ಹಲವು ರಸ್ತೆಗಳು, ಸೇತುವೆಗಳು ಹಾನಿಗೊಳಗಾಗಿದ್ದವು. ಅತಿವೃಷ್ಟಿಯಿಂದ ರಸ್ತೆಗಳು, ಸೇತುವೆಗಳು ಹಾನಿಯಾಗಿದ್ದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿತ್ತು. ಈ ಬಗ್ಗೆ ಸಚಿವ ಡಾ.ನಾರಾಯಣಗೌಡ ಅವರು ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಸಚಿವರ ಗಮನಕ್ಕೆ ತಂದು ತುರ್ತಾಗಿ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಇದೀಗ ರಸ್ತೆಗಳ ದುರಸ್ತಿಗೆ 15 ಕೋಟಿ ಹಣ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸುತ್ತೇವೆ. ಜೊತೆಗೆ ಗ್ರಾಮೀಣ ರಸ್ತೆಗಳ ದುರಸ್ತಿಗೂ ಸಹ ಸದ್ಯದಲ್ಲೇ ಅನುದಾನ ಬಿಡುಗಡೆಯಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮೂಹಿಕ ಅತ್ಯಾಚಾರ ಪ್ರಕರಣ : ಆರೋಪಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್..!