ಬೆಂಗಳೂರು: ಶಿಕ್ಷಣ ಇಲಾಖೆಯಿಂದ 15 ಸಾವಿರ ಶಿಕ್ಷಕರ ನೇಮಕಾತಿಗಾಗಿ ದಿನಾಂಕ 21-05-2022 ಮತ್ತು 22-05-2022ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಇದೀಗ ಪ್ರಕಟಿಸಿದೆ.
ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದಂತ ಅಂಕಗಳನ್ನು ಇಂದು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ.
ಅಭ್ಯರ್ಥಿಗಳು ಅಂಕಗಳು ಹಾಗೂ ಮೀಸಲಾತಿ ವಿವರ ಹೊರತುಪಡಿಸಿ, ಇತರೆ ವಿವರ ತಿದ್ದುಪಡಿಗಾಗಿ ದಿನಾಂಕ 18-08-2022 ರಿಂದ 24-08-2022ರವರೆಗೆ ಅವಕಾಶ ನೀಡಲಾಗಿದೆ. ಇಂದು ಪ್ರಕಟವಾದಂತ ಫಲಿತಾಂಶವನ್ನು ಇಲಾಖೆಯ ವೆಬ್ ಸೈಟ್ www.schooleducation.kar.nic.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿ ಎಂದು ತಿಳಿಸಿದೆ.




