Monday, April 14, 2025

Latest Posts

ರಾಜ್ಯದಲ್ಲಿಂದು ಕೊರೋನಾ ಸೋಂಕಿಗೆ 17 ಜನ ಮೃತ..!

- Advertisement -

www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 478 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,7313 ಕ್ಕೆ ಏರಿಕೆಯಾಗಿದೆ.

ಒಟ್ಟು ಗುಣಮುಖರಾದವರ ಸಂಖ್ಯೆ 2,94, 0673 ಆಗಿದೆ. 334 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,557 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಸೋಂಕಿನಿAದ 17 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೃತರ ಒಟ್ಟು ಸಂಖ್ಯೆ 38054ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ 0.42 ರಷ್ಟಿದ್ದು, ಮರಣ ಪ್ರಮಾಣ ಶೇ. 3.55 ರಷ್ಟಿದೆ.ಬೆಂಗಳೂರಿನಲ್ಲಿ 235 ಹೊಸ ಪ್ರಕರಣ ಪತ್ತೆಯಾಗಿದ್ದು, 161 ಸೋಂಕಿತರು ಗುಣಮುಖರಾಗಿದ್ದಾರೆ. ಏಳು ಸೋಂಕಿತರು ಮೃತಪಟ್ಟಿದ್ದಾರೆ.

- Advertisement -

Latest Posts

Don't Miss