ಬೆಂಗಳೂರು: ಏಪ್ರಿಲ್ ನಲ್ಲಿ ನಡೆದಂತ ಪ್ರಥಮ ಪಿಯು ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಮಂಡಳಿಯು ಇಂದು ಪ್ರಕಟಿಸಿದೆ.
ಪರೀಕ್ಷೆ ಬರೆದಂತ ಪ್ರಥಮ ಪಿಯು ವಿದ್ಯಾರ್ಥಿಗಳು, ಪಿಯು ಬೋರ್ಡ್ ಅಧಿಕೃತ ಫಲಿತಾಂಶ ಪ್ರಕಟಿಸೋ ವೆಬ್ ಸೈಟ್ result.dkpucpa.com ಗೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.
ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸಬೇಕಾಗಿದೆ. ಈ ಬಳಿಕ ಫಲಿತಾಂಶವನ್ನು ವೀಕ್ಷಿಸಬಹುದು.




