www.karnatakatv.net : ಕರ್ನಾಟಕ ದಲ್ಲಿ 1 ರಿಂದ 5 ನೇ ತರಗತಿಯವರೆಗೂ ಶಾಲೆಗಳು ಮತ್ತೆ ಆರಂಭವಾಗಿದ್ದು, ಶುಕ್ರವಾಋ ನಡೇದ ಆನ್ ಲೈನ್ ಮತ್ತು ಆಫ್ ಲೈನ್ ಮಿಟಿಂಗ್ ಗಳನ್ನು ಕರೆದು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಕೊವಿಡ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.
1ರಿಂದ 5ನೇ ತರಗತಿಗಳನ್ನು ಆರಂಭಿಸಲು ತೀರ್ಮಾನಿಸಿರುವ ಸರ್ಕಾರ ಮಾರ್ಗಸೂಚಿಯನ್ನೂ ಪ್ರಕಟಿಸಿದೆ. 20 ತಿಂಗಳ ನಂತರ ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳು ಆರಂಭವಾಗುತ್ತಿದ್ದು, 3ನೇ ಹಂತದಲ್ಲಿ 1ರಿಂದ 5ನೇ ತರಗತಿ ಮಕ್ಕಳು ಶಾಲೆಗೆ ಬರುತ್ತಿದ್ದಾರೆ. ಅಕ್ಟೋಬರ್ 30ರವರೆಗೆ ಅರ್ಧದಿನ ಮಾತ್ರ ತರಗತಿ ನಡೆಯಲಿದೆ. ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ, ಶನಿವಾರ ಬೆಳಗ್ಗೆ 8ರಿಂದ 11.40ರವರೆಗೆ ತರಗತಿ ನಡೆಸಬೇಕು ಎಂದು ಸರ್ಕಾರ ಸೂಚಿಸಿದ್ದು, ನ.2ರಿಂದ ಪೂರ್ಣಾವಧಿ ತರಗತಿಗಳು ಅಂದರೆ, ಬೆಳಗ್ಗೆ 10ರಿಂದ ಸಂಜೆ 4.30ರವರೆಗೂ ತರಗತಿಗಳು ನಡೆಯಲಿವೆ. ಮಕ್ಕಳು ಶಾಲೆಗೆ ಬರಲು ಪೋಷಕರ ಒಪ್ಪಿಗೆ ಕಡ್ಡಾಯವಾಗಿದೆ.
ಮಕ್ಕಳಿಗೆ ಲಸಿಕೆಯನ್ನು ಹಾಕಿಸಿ ಶಾಲೆಗಳನ್ನು ಓಪೆನ್ ಮಾಡುವುದಾಗಿ ಕೆಲವು ಪೋಷಕರು ಹೇಳಿದರೆ, ಇನ್ನೂ ಕೆಲವು ಪೋಷಕರು, ಶಾಲೆಗಳು ಓಪೆನ್ ಆಗಿರುವುದು ಒಳ್ಳೆಯದೆ ಆಗಿದೆ ಮಕ್ಕಳು ಮನೆಯಲ್ಲಿ ಏನೂ ಕಲಿಯುತ್ತಿಲ್ಲ ಎಂದು ಬೆಂಬಲಿಸಿದ್ದಾರೆ.
ಅ.30ರವರೆಗೆ ಮಧ್ಯಾಹ್ನದ ಬಿಸಿಯೂಟ ಇರುವುದಿಲ್ಲ. ನ.2ರಿಂದ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ವ್ಯವಸ್ಥೆ ಮಾಡಲಾಗುವುದು. ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳೇ ಊಟ ತರಬೇಕು. ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಒಂದು ಕೊಠಡಿಯಲ್ಲಿ 15-20 ಮಕ್ಕಳ ತಂಡ ರಚಿಸಿ ಪಾಠ. ಶಾಲೆ ಗೇಟ್ ಬಳಿ ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಡ್ಡಾಯ. ಯಾವುದೇ ಮಕ್ಕಳಲ್ಲಿ ಕೊರೊನಾ ಕಂಡುಬoದರೆ ಶಾಲೆಯನ್ನು ಸ್ಯಾನಿಟೈಸ್ ಮಾಡಬೇಕು. ಮುಂದಿನ ಆದೇಶದವರೆಗೆ ಎಲ್ ಕೆ ಜಿ, ಯುಕೆಜಿ ಆರಂಭಿಸುವoತಿಲ್ಲ. ಶಿಕ್ಷಕರು, ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯ. ಶಿಕ್ಷಕರು 2 ಡೋಸ್ ಲಸಿಕೆ ಪಡೆದಿರುವುದು ಕಡ್ಡಾಯ. 50 ವರ್ಷ ಮೇಲ್ಪಟ್ಟ ಶಿಕ್ಷಕರು ಫೇಸ್ ಶೀಲ್ಡ್ ಧರಿಸಬೇಕು ಎಂದು ಸರ್ಕಾರ ಆದೇಶಿಸಿದೆ.