ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರದಂತಹ ಕೃತ್ಯಗಳು ನಡೆಯುತ್ತಿರುವುದು ನಿಜಕ್ಕೂ ಶಾಕಿಂಗ್ ಸಂಗತಿಯಾಗಿದೆ. ಆದರೆ ಈ ನಡುವೆಯೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತರು ಅತ್ಯಾಚಾರವೆಸಗಿರುವ ಆರೋಪ ಮಾಡಲಾಗಿದೆ. ಘಟನೆಯಿಂದ ಇಡೀ ರಾಜ್ಯವೇ ಬೆಚ್ಚಿಬೀಳುವಂತೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಮೇಲೆ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರು ಆರೋಪಿಗಳು ಖಾಕಿ ವಶದಲ್ಲಿದ್ದಾರೆ
ಇನ್ನೂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಎದುರಿಸುತ್ತಿರುವ ಬಂಧಿತರನ್ನು ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರದ ಲೆಕ್ಚರ್ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತು ಪತ್ತೆ ಹಚ್ಚಲಾಗಿದೆ.
ಅಭ್ಯಾಸಕ್ಕೆ ಸಂಬಂಧಿಸಿದ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿಗೆ ಫಿಸಿಕ್ಸ್ ಉಪನ್ಯಾಸಕ ನರೇಂದ್ರ ಹತ್ತಿರವಾಗಿದ್ದನು. ಬಳಿಕ ನಿಧಾನವಾಗಿ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರೆಸಿದ್ದ. ಹಿಗೆಯೇ ವಿದ್ಯಾರ್ಥಿನಿ ಜೊತೆ ಸಲುಗೆ ಬೆಳೆಸಿಕೊಂಡಿದ್ದ. ಅಲ್ಲದೆ ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುತ್ತಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ, ಈ ವಿಚಾರ ಯಾರ ಮುಂದೆಯೂ ಹೇಳದಂತೆ ವಿದ್ಯಾರ್ಥಿನಿಯನ್ನು ಬೆದರಿಸಿದ್ದ.
ಮತ್ತೊಬ್ಬ ಉಪನ್ಯಾಸಕನ ಕೃತ್ಯವನ್ನಿಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿ ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ನನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ ಎಂದು ಹೆದರಿಸಿ ಬಯಾಲಜಿ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಮುಂದಾಗಿದ್ದನು. ಆ ಸಂದರ್ಭದಲ್ಲಿ ಆಕೆ ವಿರೋಧ ವ್ಯಕ್ತಪಡಿಸಿದ್ದಳು. ಆಗ, ಸಂದೀಪ್ ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡಿದ್ದಾನೆ.
ಇಷ್ಟಕ್ಕೇ ಬಿಡದ ಕಾಮುಕರು ಸಂದೀಪ್ ಅತ್ಯಾಚಾರವೆಸಗಿದ್ದ ಅನೂಪ್ ಎನ್ನುವ ಸ್ನೇಹಿತನ್ನದ್ದಾಗಿತ್ತು. ಹೀಗಾಗಿ ಆತನೂ ಆಕೆಯನ್ನು ಹೆದರಿಸಿ, ನೀನು ನನ್ನ ರೂಮ್ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್ನಲ್ಲಿ ಸಿಸಿಟಿವಿ ಇದೆ’ ಎಂದು ಭೀತಿ ಹುಟ್ಟಿಸಿ, ಆತನೂ ವಿದ್ಯಾರ್ಥಿನಿಯ ,ಮೇಲೆ ಅತ್ಯಾಚಾರ ನಡೆಸಿದ್ದಾನೆ.
ಉಪನ್ಯಾಸಕರ ಉಪಟಳ ತಾಳಲಾರದೇ ಮನನೊಂದು ವಿದ್ಯಾರ್ಥಿನಿ ತನಗೆ ತೊಂದರೆ ಹೆಚ್ಚಾಗತೊಡಗಿದಾಗ ತನಗಾದ ಅನ್ಯಾಯದ ಬಗ್ಗೆ ಪೋಷಕರ ಎದುರು ಬಾಯಿಬಿಟ್ಟಿದ್ದಾಳೆ. ಬಳಿಕ ತಕ್ಷಣ ಅವಳನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಅವಳಿಗೆ ಆಪ್ತ ಸಮಾಲೋಚನೆಯ ಜೊತೆಗೆ ಕೌನ್ಸೆಲಿಂಗ್ ನಡೆಸಿ ಪೊಲೀಸರು ದೂರು ನೀಡಲು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆಗಿಳಿದ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.