ಸಿಲಿಂಡರ್‌ಗೆ 2 ಸಾವಿರ ರೂಪಾಯಿ; 105 ಸಿಲಿಂಡರ್‌ಗಳು ಜಪ್ತಿ!

ಅಡುಗೆ ಸಿಲಿಂಡರ್ ಕೊರತೆಯನ್ನು ದುರ್ಬಳಕೆ ಮಾಡಿಕೊಂಡು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿ 105 LPG ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ.

ಜಪ್ತಿಗೊಂಡ ಸಿಲಿಂಡರ್‌ಗಳ ಒಟ್ಟು ಮೌಲ್ಯ ಸುಮಾರು ₹2.55 ಲಕ್ಷಕ್ಕೂ ಅಧಿಕವಾಗಿದ್ದು, ಗೃಹ ಬಳಕೆಯ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ದ್ವಿಗುಣ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಸಾಮಾನ್ಯವಾಗಿ ₹1,000ರ ಒಳಗಿರುವ ಸಿಲಿಂಡರ್‌ಗಳನ್ನು ₹2,000ಕ್ಕೂ ಅಧಿಕ ದರದಲ್ಲಿ ಮಾರಾಟ ಮಾಡಲಾಗುತ್ತಿತ್ತು.

ಜನವಾಡ ಗ್ರಾಮದ ಹೊರವಲಯದ ಹೊಲದಲ್ಲಿ ಸಿಲಿಂಡರ್‌ಗಳನ್ನು ಸಂಗ್ರಹಿಸಿ ಅಕ್ರಮವಾಗಿ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ಕು ಗ್ಯಾಸ್ ಏಜೆನ್ಸಿಗಳಿಗೆ ಸಂಬಂಧಿಸಿದ ನಾಲ್ವರನ್ನು ಬಂಧಿಸಲಾಗಿದೆ.

ಈ ಕುರಿತು ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ. ಅಡುಗೆ ಗ್ಯಾಸ್ ಸಮಸ್ಯೆಯನ್ನು ದುರುಪಯೋಗಪಡಿಸಿಕೊಂಡು ಲಾಭ ಪಡೆಯಲು ಮುಂದಾದ ಆರೋಪಿಗಳಿಗೆ ಕಾನೂನು ಕ್ರಮದ ಮೂಲಕ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ವರದಿ : ಲಾವಣ್ಯ ಅನಿಗೋಳ

About The Author