Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕು ಹಾಗೂ ಹುಬ್ಬಳ್ಳಿ ಗ್ರಾಮೀಣ ಭಾಗದ ಜನರ ಸಮಸ್ಯೆ ಆಲಿಸುವ ದೃಷ್ಟಿಯಿಂದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ಹಮ್ಮಿಕೊಳ್ಳಲಾಗಿದ್ದು, 20 ಅರ್ಜಿಗಳು ಬಂದಿವೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ನಗರದಲ್ಲಿಂದು ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಒಟ್ಟು 20 ಅರ್ಜಿಯನ್ನು ಸಾರ್ವಜನಿಕರು ಸಲ್ಲಿಸಿದ್ದು, ಇದರಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಸಂಬಂಧಿಸಿದ 9 ಅರ್ಜಿಗಳು ಬಂದಿವೆ. ಅಲ್ಲದೇ ಕಂದಾಯ ಇಲಾಖೆಗೆ ಸಂಬಂಧಿಸಿದ 5 ಅರ್ಜಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 01, ತಾಲೂಕು ಪಂಚಾಯತಿ ವ್ಯಾಪ್ತಿಯಲ್ಲಿ 02, ಸರ್ವೇ ಇಲಾಖೆಗೆ ಸಂಬಂಧಿಸಿದಂತೆ 02 ಹಾಗೂ ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ 01 ಅರ್ಜಿ ಬಂದಿದೆ ಎಂದರು.
ಇನ್ನೂ ಸಾರ್ವಜನಿಕರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಮ್ಮುಖದಲ್ಲಿ ದೂರುಗಳನ್ನು ಆಲಿಸಿದ್ದು, ತಕ್ಷಣವೇ ಸರ್ಕಾರದ ನಿರ್ದೇಶನದ ಮೇರೆಗೆ ಇತ್ಯರ್ಥ ಮಾಡಲಾಗುತ್ತದೆ ಎಂದು ಅವರು ಹೇಳಿದರು.