Bengaluru News: ಬೆಂಗಳೂರು: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು, 25 ಕನ್ನಡಿಗರಿಗೆ ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ ಪ್ರಶಸ್ತಿಯನ್ನು ನೀಡಿ, ಗೌರವಿಸಿದ್ದಾರೆ.
ಬೆಂಗಳೂರಿನ ರಾಡಿಸನ್ ಬ್ಲೂ ಹೊಟೇಲ್‌ನಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಭಾರತ ರತ್ನ ಸಿ.ಎನ್.ಆರ್ ರಾವ್, ಪದ್ಮವಿಭೂಷಣ ಎಸ್.ಎಂ.ಕೃಷ್ಣ, ಡಿ.ವೀರೆಂದ್ರ ಹೆಗ್ಡೆ, ಬಿ.ಸರೋಜಾದೇವಿ, ಪದ್ಮಶ್ರೀ ತುಳಸಿಗೌಡ, ಸಂಸದರಾದ ತೇಜಸ್ವಿ ಸೂರ್ಯ, ಕ್ರಿಕೇಟಿಗ ವೆಂಕಟೇಶ್ ಪ್ರಸಾದ್, ಪ್ರಥ್ವಿ ಸಿಂಗ್, ಖುಶ್ಬೂ ಯಾದವ್, ಉಪೇಂದ್ರ ರಾವ್ ಸೇರಿ 25 ಜನರಿಗೆ ಈ ಪ್ರಶಸ್ತಿಯನ್ನು, ರಾಜ್ಯಪಾಲರು ನೀಡಿ ಗೌರವಿಸಿದರು.
ಈ ಪ್ರಶಸ್ತಿಯ ತೀರ್ಪುಗಾರರಾದ, ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ, ಕೆ.ಜಿ.ಬಾಲಕೃಷ್ಣನ್ ಮಾತನಾಡಿ, ಸಮಾಜದಲ್ಲಿ ಉದಾರತೆಯನ್ನು ಪ್ರೋತ್ಸಾಹಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಬೇಕು. ಸನ್ಮಾನ ಸಮಾರಂಭ ಸಮಾಜದಲ್ಲಿ ಉತ್ತಮ ಕೆಲಸಗಳಿಗೆ ಪ್ರೇರಣೆಯಾಗಿದೆ.
ಇನ್ನು ಪ್ರಶಸ್ತಿ ಪಡೆದ ಎಲ್ಲರನ್ನೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿನಂದಿಸಿದರು. ಈ ಮಹಾನ್ ವ್ಯಕ್ತಿಗಳನ್ನು ಗೌರವಿಸುವ ಅವಕಾಶ ನನಗೆ ಸಿಕ್ಕಿದೆ. ನೀವು ಇನ್ನು ಮುಂದೆಯೂ ಈ ರೀತಿ ಸಮಾಜಕ್ಕೆ ಒಳ್ಳೆಯದಾಗುವ ಕಾರ್ಯಗಳನ್ನು ಮಾಡುತ್ತಿರಬೇಕು ಎಂದು ಹೇಳಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗೇಟ್ ಮೇಲೆಯೇ ಬಟ್ಟೆ ಒಣ ಹಾಕಿದ ಮಹಿಳೆ, ಫೋಟೋ ವೈರಲ್
ಹಾಸನಾಂಬೆಯ ದರ್ಶನ ಪಡೆದ ಸಿಎಂ: ಹೆಚ್ಡಿಕೆ, ಯತ್ನಾಳ್ ವಿರುದ್ಧ ವಾಗ್ದಾಳಿ
ಅನುಮಾನಕ್ಕೆ ಬಾಣಂತಿ ಪತ್ನಿಯನ್ನೇ ಕೊಂದ ಪತಿ: ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಪೊಲೀಸಪ್ಪ