ಅರಮನೆ ನಗರಿಯಲ್ಲಿ 282 ಹೊಸ ಕೊರೊನಾ ಕೇಸ್

www.karnatakatv.net: ರಾಜ್ಯ- ಮೈಸೂರಿನಲ್ಲಿಂದು 282 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,65,792ಕ್ಕೆ ಏರಿಕೆಯಾಗಿದೆ. ಇಂದು 576 ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,59,288 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳು 4,351ಕ್ಕೆ ಇಳಿಕೆಯಾಗಿದೆ. ಇಂದು ಸೋಂಕಿನಿಂದ 8 ಮಂದಿ ಸಾವನ್ನಪ್ಪಿದ್ದು, ಇದುವರೆಗೆ 2,153 ಸೋಂಕಿತರು ಸಾವನ್ನಪ್ಪಿದ್ದಾರೆ.

About The Author