BREAKING: ಮಾಜಿ ಸಿಎಂ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿ 29 ನಾಯಕರಿಗೆ ಸಮನ್ಸ್ ಜಾರಿ

ಬೆಂಗಳೂರು: ಕೊರೋನಾ ನಿಯಮ ಉಲ್ಲಂಘಿಸಿ, ಮೇಕೆದಾಟು ನದಿ ನೀರಿಗಾಗಿ ಪಾದಯಾತ್ರೆ ನಡೆಸಿದಂತ ಕಾಂಗ್ರೆಸ್ ನಾಯಕರಿಗೆ, ನಾಳೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್ ನೀಡಿದೆ.

ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ನಿಯಂತ್ರಣ ಕ್ರಮ ಜಾರಿಗೊಳಿಸಿತ್ತು. ಇದನ್ನು ಲೆಕ್ಕಿಸದೇ, ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ನದಿ ನೀರಿಗಾಗಿ ಪಾದಯಾತ್ರೆಯನ್ನು ನಡೆಸಲಾಗಿತ್ತು. ನಿಯಮ ಮೀರಿ ಕೊರೋನಾ ಸಂದರ್ಭದಲ್ಲಿಯೇ ಪಾದಯಾತ್ರೆ ನಡೆಸಿದ್ದಂತ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹಿತ 29 ಮಂದಿ ವಿರುದ್ಧ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಈ ಪ್ರಕರಣ ಸಂಬಂಧ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆ ನಡೆಸಿತು. ನಾಳೆ ಪ್ರಕರಣ ಸಂಬಂಧ ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಸಮನ್ಸ್ ಜಾರಿಗೊಳಿಸಿದೆ.

About The Author