Tumakuru News: ತುಮಕೂರು: ಕೆಎಸ್‌ಆರ್‌ಟಿಸಿ ಬಸ್ ದರ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ, ತುಮಕೂರಿನಲ್ಲಿ ಮಾತನಾಡಿದ ಕೆಎಸ್ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್,ಮೊನ್ನೆ ದಿನ ಬೋರ್ಡ್ ಮೀಟಿಂಗ್ ಮಾಡಿದೆ. ಟಿಕೆಟ್ ದರ ಹೆಚ್ಚಳ ಮಾಡುವ ವಿಚಾರದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿದ್ದೇವೆ ಎಂದಿದ್ದಾರೆ.
ಹಿಂದೆ 2019 ರಲ್ಲಿ ಬಸ್ ಟಿಕೆಟ್ ದರ ಹೆಚ್ಚಳ ಆಗಿತ್ತು. ಇಲ್ಲಿ ತನಕ ಟಿಕೆಟ್ ದರ ಹೆಚ್ಚಳ ಮಾಡದೆ 5 ವರ್ಷ ಆಗಿತ್ತು. ತೈಲ ಬೆಲೆ ಏರಿಕೆಯಾಗಿರುವುದರಿಂದ ದರ ಏರಿಕೆ ಅನಿವಾರ್ಯ. ನೌಕರರಿಗೆ ಸಂಬಳ ಹೆಚ್ಚಳ ಮತ್ತು ಸವಲತ್ತು ಕೊಡುವುದನ್ನ ಮಾಡಬೇಕಾದರೆ ದರ ಹೆಚ್ಚಳ ಅನಿವಾರ್ಯ. ಕೆಎಸ್‌ಆರ್‌ಟಿಸಿ ನೌಕರರ ವೇತನ ಪರಿಷ್ಕರಣೆ 2020ರಲ್ಲಿ ಮಾಡಬೇಕಿತ್ತು. ಇಲ್ಲಿತನಕ ಮಾಡಿಲ್ಲ. ಈ ಬಾರಿ 2024ರಲ್ಲಿ ವೇತನ ಪರಿಷ್ಕರಣೆ ಮಾಡ್ತಿವಿ ಹಾಗಾಗಿ ಟಿಕೆಟ್ ದರ ಹೆಚ್ಚಳ ಆಗುತ್ತೆ.
ಕಾಲಕಾಲಕ್ಕೆ ಹೆಚ್ಚಳ ಮಾಡಿದ್ರೆ ಹೀಗೆಲ್ಲ ಆಗ್ತಿರಲಿಲ್ಲ. ಕಳೆದ ತ್ರೈ ಮಾಸಿಕದಲ್ಲಿ ಕೆಎಸ್‌ಆರ್ಟಿಸಿಗೆ 295 ಕೋಟಿ ನಷ್ಟ ಆಗಿದೆ. 40 ಹೊಸ ವೋಲ್ವೋ ಬಸ್‌ಗಳಿಗೆ ಪ್ರಸ್ಥಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈಗಾಗಲೆ 600 ಸಾಮಾನ್ಯ ಬಸ್‌ಗಳನ್ನು ಕೊಂಡುಕೊಳ್ಳಲಾಗಿದೆ. 15%-20% ದರ ಹೆಚ್ಚಳ ಮಾಡಲು ಪ್ರಸ್ಥಾವನೆ ಸಲ್ಲಿಸಲಾಗಿದೆ. ಉಳಿದದ್ದು ಸಿಎಂ ವಿವೇಚನೆಗೆ ಬಿಟ್ಟಿದ್ದು. ರೇಟ್ ಜಾಸ್ತಿ ಮಾಡಿರುವುದರಿಂದ ಪುರುಷ ಪ್ರಯಾಣಿಕರಿಗೆ ಹೊರೆಯಾಗುತ್ತದೆ ಅನ್ನೋ ಪ್ರಶ್ನೆನೆ ಇಲ್ಲ. ಶಕ್ತಿ ಯೋಜನೆಯಲ್ಲಿನ ಮಹಿಳಾ ಪ್ರಯಾಣಿಕರ ಟಿಕೆಟ್ ದರ ಹೆಚ್ಚಾಗುತ್ತೆ, ಸರ್ಕಾರ ಅದನ್ನು ತುಂಬಿಕೊಡುತ್ತೆ. ಕೆಎಸ್‌ಆರ್‌ಟಿಸಿ ಸಂಸ್ಥೆ ಉಳಿಯಬೇಕಾದರೆ ದರ ಹೆಚ್ಚಳ ಅನಿವಾರ್ಯ ಎಂದು ಶ್ರೀನಿವಾಸ್ ಹೇಳಿದ್ದಾರೆ.