ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣದಲ್ಲಿ, ಯೂಟ್ಯೂಬರ್ ಸಮೀರ್‌ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಪ್ರಕರಣ ಸಂಬಂಧ ಸಮೀರ್‌ನನ್ನ ಬಂಧಿಸಲು, ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ಬಂದಿದ್ರು. ಆದ್ರೆ ಸಮೀರ್ ಸಿಕ್ಕಿರಲಿಲ್ಲ. ಇದಾದ ಕೆಲ ಹೊತ್ತಲ್ಲೇ, ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯ ಆಗಸ್ಟ್ 21ರಂದು ನಿರೀಕ್ಷಣಾ ಜಾಮೀನು ನೀಡಿತ್ತು.
ಇದರ ಬೆನ್ನಲ್ಲೇ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಚಿಕ್ಕಮಗಳೂರಿನ ಕಡೂರು ಪೊಲೀಸ್ ಠಾಣೆಯಲ್ಲಿ, ಮಂಜುನಾಥ್ ಜೈನ್ ಎಂಬುವವರು ದೂರು ದಾಖಲಿಸಿದ್ದಾರೆ. ಧರ್ಮಸ್ಥಳದ ಬಗ್ಗೆ ಅಸತ್ಯ ಮಾಹಿತಿ, ಸುಳ್ಳು ವಿಡಿಯೋ ಮಾಡಿ ಅಪಪ್ರಚಾರ ಮಾಡಲಾಗ್ತಿದೆ. ಸಮೀರ್ ಎಂಡಿ ವಿಡಿಯೋದಲ್ಲಿ ಸುಳ್ಳು ಮಾಹಿತಿ ಹರಡಲಾಗ್ತಿದೆ. ಇದು ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದೆ ಅಂತಾ ಆರೋಪಿಸಿದ್ದಾರೆ.
ಯೂಟ್ಯೂಬರ್ ಸಮೀರ್, ಬೆಳ್ತಂಗಡಿಯ ಸರ್ಕಲ್ ಇನ್ಸ್ಪೆಕ್ಟರ್‌ಗೆ ಪತ್ರ ಬರೆದಿದ್ದಾನೆ. ನನ್ನ ಮೇಲೆ ಆಗಿರುವ ಎಫ್ಐಆರ್‌ಗೆ ಸಂಬಂಧಿಸಿ ಪತ್ರ ಬರೆಯುತ್ತಿದ್ದೇನೆ. ನಾನು ಧರ್ಮಸ್ಥಳ ಠಾಣೆಗೆ ಬರಲು ಸಿದ್ಧವಾಗಿದ್ದೆ. ಆದರೆ ನನ್ನ ಸ್ನೇಹಿತರ ಮೇಲೆ ಮಾರಣಾಂತಿಕವಾಗಿ ಹಲ್ಲೆಯಾಗಿದೆ. ಟಾರ್ಗೆಟ್ ಮಾಡಿ ಯೂಟ್ಯೂಬ್ ಸ್ನೇಹಿತರಿಗೆ ಹಲ್ಲೆ ಮಾಡಿದ್ದಾರೆ. ನನಗೆ ಪ್ರಾಣ ಬೆದರಿಕೆ ಇದೆ ಹಾಗೂ ಅಪಾಯವಿದೆ. ಹೀಗಾಗಿ ನಾನು ಸೆಷನ್ ನ್ಯಾಯಾಲಯದಲ್ಲಿ ಜಾಮೀನಿಗೆ ಅಪ್ಲೈ ಮಾಡಿದ್ದೇನೆ ಅಂತಾ ಹೇಳಿದ್ದಾನೆ.
ಒಂದು ವೇಳೆ, ನಾನು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದರೆ ನನಗೆ ರಕ್ಷಣೆ ನೀಡಿ. ವಿಡಿಯೋ ಕಾಲ್ ಮುಖಾಂತರ ಇನ್ವೆಸ್ಟಿಗೇಷನ್‌ಗೆ ಸಹಕರಿಸುತ್ತೇನೆ. ನಾನು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಹಕರಿಸುತ್ತೇನೆ. ವಿಳಾಸ, ದಿನಾಂಕ ಹಾಗೂ ನನ್ನ ರಕ್ಷಣೆ ಬಗ್ಗೆ ತಿಳಿಸಿದರೆ ಬರುತ್ತೇನೆ. 15 ದಿನಗಳ ಕಾಲಾವಕಾಶದ ಒಳಗಡೆ ನಿಮ್ಮ ಮುಂದೆ ಹಾಜರಾಗುತ್ತೇನೆ. ದಯವಿಟ್ಟು ನನಗೆ ರಕ್ಷಣೆ ನೀಡಿ ಎಂದು ಎಂದು ಪತ್ರದ ಮೂಲಕ ಎಂ.ಡಿ. ಸಮೀರ್ ಮನವಿ ಮಾಡಿದ್ದಾನೆ.