Friday, July 4, 2025

Latest Posts

Bangaloreನಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ 3 ಎಕರೆ ಜಾಗ ಬೊಮ್ಮಾಯಿ ಭರವಸೆ..!

- Advertisement -

ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ 3 ಎಕರೆ ಜಾಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (bommai) ಭರವಸೆ ನೀಡಿದರು. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ (North Karnataka Association) ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ (shivakumar Matey) ಮೇಟಿ ನೇತೃತ್ವದಲ್ಲಿ ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ (CM Home Office in Krishna) ತಮ್ಮನ್ನು ಭೇಟಿ ಮಾಡಿದ ನಿಯೋಗಕ್ಕೆ ಅವರು ಈ ಭರವಸೆ ನೀಡಿದರು. ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಬೆಂಗಳೂರಿಗೆ ಬರುವ ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರಿಗೆ ಅನುಕೂಲವಾಗಲು ವಸತಿ ನಿಲಯ ನಿರ್ಮಾಣ ಮಾಡಲು ಶೀಘ್ರವೇ ಜಮೀನು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಇದರೊಂದಿಗೆ ಉತ್ತರ ಕರ್ನಾಟಕ ಭಾಗದ ಪ್ರಮುಖ ಯೋಜನೆಗಳಿಗೆ ಬಜೆಟ್ ನಲ್ಲಿ ಆದ್ಯತೆ ನೀಡುವಂತೆ ನಿಯೋಗ ಮಾಡಿದ ಮನವಿಗೆ ಸಿಎಂ ಸಕಾರಾತ್ಮಕ ಸ್ಪಂದಿಸಿದರು. ಮುಖ್ಯಮಂತ್ರಿಗಳ ಭೇಟಿಯ ನಿಯೋಗದಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ (Shivakumar Matey), ಪದಾಧಿಕಾರಿಗಳಾದ ಬಸವರಾಜ ಬೇಳೂರು, ಶ್ರೀಧರ ಕಲ್ಲೂರು, ಗಂಗಾಧರ ವಾಲಿ, ಅಯ್ಯನಗೌಡ ಬಿರಾದಾರ, ಸಂತೋಷ ಬಸೆಟ್ಟಿ, ಭೀಮಣ್ಣ ನಲತ್ವಾಡ, ಪತ್ರಕರ್ತ ಶಂಕರ ಪಾಗೋಜಿ ಹಾಜರಿದ್ದರು.

- Advertisement -

Latest Posts

Don't Miss