ದೆಹಲಿ: ರಬ್ಬರ್ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಈಶಾನ್ಯ ದೆಹಲಿಯ ಝಿಲ್ ಮಿಲ್ ಕೈಗಾರಿಕಾ ಪ್ರದೇಶದಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, ರಬ್ಬರ್ ಕಾರ್ಖಾನೆಯಲ್ಲಿ ಏಕಾಏಕಿ ಕಾಣಿಸಿಕೊಂಡಿದ್ದ ಬೆಂಕಿ ಕ್ಷಣ ಮಾತ್ರದಲ್ಲಿ ಇಡೀ ಫ್ಯಾಕ್ಟರಿ ಆವರಿಸಿದೆ. ಬೆಂಕಿಯ ಕೆನ್ನಾಲಗೆಗೆ ಇಬ್ಬರು ಮಹಿಳಾ ಕಾರ್ಮಿಕರು ಸೇರಿದಂತೆ ಮೂವರು ಸಜೀವ ದಹನವಾಗಿದೆ. ಇನ್ನು ಸುದ್ದಿ ತಿಳಿದ ಅಗ್ನಿಶಾಮಕ ದಳ 26 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ.
ಕಾರ್ಖಾನೆಯಲ್ಲಿ ಇನ್ನೂ ಹಲವು ಮಂದಿ ಸಿಲುಕಿರುವ ಶಂಕೆ ಇದ್ದು, ಅಗ್ನಿಶಾಮಕ ಸಿಬ್ಬಂದಿ ಕಾರ್ಖಾನೆಯ ಒಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ರಬ್ಬರ್ ಸಾಮಾಗ್ರಿಗಳು ಮತ್ತು ಯಂತ್ರೋಪಕರಣಗಳು ಸುಟ್ಟು ಭಸ್ಮವಾಗಿದೆ. ಇನ್ನು ಅಗ್ನಿ ಅವಘಡಕ್ಕೆ ಈ ವರಗೆ ಕಾರವೇನು ಅಂತ ತಿಳಿದುಬಂದಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೊಳ್ಳಲಿದ್ದಾರೆ.
ದುಬಾರಿಯಾಯ್ತು ಅಕ್ಕಿ ರೇಟು..! ಮಿಸ್ ಮಾಡದೇ ಈ ವಿಡಿಯೋ ನೋಡಿ