Friday, March 14, 2025

Latest Posts

ವಿದ್ಯುತ್ ಸ್ಪರ್ಶಿಸಿ ರಕ್ಷಣೆಗೆಂದು ಹೋದ ಮೂವರ ಸಾವು

- Advertisement -

ಮಂಡ್ಯ: ಅಪಘಾತಕ್ಕೊಳಗಾಗಿದ್ದವರನ್ನು ಕಾಪಾಡಲು ಹೋಗಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ.

ಮದ್ದೂರು ತಾಲೂಕಿನ ಮಣಿಗೆರೆ ಗ್ರಾಮದ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಹೊಡೆದಿತ್ತು. ಅಲ್ಲಿಯೇ ಇದ್ದ ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದ್ದ ಪರಿಣಾಮ ವಿದ್ಯುತ್ ತಂತಿಗಳು ತುಂಡಾಗಿ ಬಿದ್ದಿದ್ದವು.ಕಾರಿನಲ್ಲಿದ್ದವರ ರಕ್ಷಿಸುವ ಗಡಿಬಿಡಿಯಲ್ಲಿ ರಕ್ಷಣೆಗೆ ತೆರಳಿದ್ದ ಮೂವರು ವಿದ್ಯುತ್ ತಂತಿಯನ್ನು ತುಳಿದು ಸಾವನ್ನಪ್ಪಿದ್ದಾರೆ.

ಮೃತರನ್ನು ಮಣಿಗೆರೆಯ ದೇವರಾಜು, ಪ್ರದೀಪ್ ಹಾಗೂ ಪ್ರಸನ್ನ ಅಂತ ಗುರುತಿಸಲಾಗಿದೆ. ಇನ್ನು ಕಾರಿನಲ್ಲಿದ್ದವರೆಲ್ಲರನ್ನೂ ರಕ್ಷಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಎಲ್ಲಿ ಆಗಿದೆ ಸಾಲ ಮನ್ನಾ?? ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=fQh1iHriNBE
- Advertisement -

Latest Posts

Don't Miss