- Advertisement -
www.karnatakatv.net: ರಾಜ್ಯ- ಬೆಂಗಳೂರು- ಕೊರೊನಾದಿಂದ ಶೇ.30ರಷ್ಟು ಮಕ್ಕಳು ಕಲಿಕೆಯಿಂದ ವಂಚಿತರಾಗಿದ್ದಾರೆ, ಇದು ಬಹಳ ಗಂಭೀರವಾದ ವಿಚಾರ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಡಿಎಸ್ ಇಆರ್ ಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ ಕೈಗೊಂಡ ಸಮೀಕ್ಷೆಯಲ್ಲಿ ಇದು ವರದಿಯಾಗಿದೆ. ಹೀಗಾಗಿ, ಈ ಸಮೀಕ್ಷೆ ಅನ್ವಯ ಈ ವರ್ಷ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಅವರು ಕಲಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಶಿಕ್ಷಕರು ಶ್ರಮಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.
- Advertisement -