Friday, July 11, 2025

Latest Posts

ಒಬ್ಬನಿಗೇ 30 ಸೈಟ್ ಮುಡಾ ಕರ್ಮಕಾಂಡ 2.O : E.D ಮಾಡಿರುವ ಮುಡಾ ಪಟ್ಟಿಯಲ್ಲಿ ಶಾಕಿಂಗ್‌ ಅಂಶ!

- Advertisement -

ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ ಅಂದ್ರೆ ಅದು ಮುಡಾ ಹಗರಣ. ಇದರಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನೇರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಇ.ಡಿ ಇತ್ತೀಚೆಗೆ 160 ಆಸ್ತಿ ಮುಟ್ಟುಗೋಲು ಕೂಡ ಹಾಕಿತ್ತು. ಇದೀಗ ಈ ವಿಚಾರವಾಗಿ ಮತ್ತಷ್ಟು ಸ್ಫೋಟಕ ಅಂಶಗಳು ಪತ್ತೆ ಆಗಿವೆ.

ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಒಂದೊಂದಾಗೆ ಸತ್ಯಗಳು ಹೊರ ಬರುತ್ತೀವೆ. ಈ ಹಿಂದೆ ಜಾರಿ ನಿರ್ದೇಶನಾಲಯ 300 ಕೋಟಿ ರೂ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿತ್ತು. ಈ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಬಹಿರಂಗವಾಗಿರಲಿಲ್ಲ. ಆದರೆ ಇದೀಗ ಮುಟ್ಟುಗೋಲು ಹಾಕಿದ ಪಟ್ಟಿಯನ್ನು ಮೈಸೂರು ಅಭಿವೃದ್ಧಿ ಪ್ರಾಧಿಕಾರ ಸೇರಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಇ.ಡಿ ರವಾನೆ ಮಾಡಿದ್ದು ಇ ಒಬ್ಬನೇ ವ್ಯಕ್ತಿಗೆ ಅಕ್ರಮವಾಗಿ 30 ರಿಂದ 40 ನಿವೇಶನಗಳು ಕೊಟ್ಟಿರುವುದು ಪತ್ತೆ ಆಗಿದೆ. ಆ ಮೂಲಕ ಮುಡಾ ಪ್ರಕರಣದ ಮತ್ತಷ್ಟು ಕರ್ಮಕಾಂಡ ಬಯಲಾಗಿದೆ.

ಮೈಸೂರಿನ ಹೆಸರಾಂತ ಚರ್ಚ್ ಕ್ಯಾಥೆಡ್ರಲ್ ಪರೀಷ್ ಸೊಸೈಟಿ ಒಂದಕ್ಕೆ ನೀಡಿದ್ದ 40 ಸೈಟ್​ಗಳನ್ನು ಮುಟ್ಟುಗೋಲು ಹಾಕಲಾಗಿದೆ. 7 ನೇ ವಯಸ್ಸಿನಲ್ಲಿ ಭೂಮಿ ಕಳೆದುಕೊಂಡಿದ್ದೇನೆ ಎಂದು ಅರ್ಜಿ ಹಾಕಿದ್ದ ಅಬ್ದುಲ್ ವಾಹಿದ್ ಎಂಬಾತನಿಗೆ ನೀಡಿದ್ದ 41 ಸೈಟ್​ಗಳನ್ನು ಇ.ಡಿ ವಶಕ್ಕೆ ಪಡೆದುಕೊಂಡಿದೆ. ಅಲ್ಲದೆ ಕುವೆಂಪು ನಗರದ ರವಿಕುಮಾರ್, ಸುಜಾತ, ಮಹೇಶ್ ಹಾಗೂ ರಾಜು ಕುಟುಂಬಕ್ಕೆ ನೀಡಿದ್ದ 31 ನಿವೇಶನಗಳು ಮತ್ತು ಪ್ರತಿಷ್ಠಿತ ಆಂದೋಲನ ವೃತ್ತದ ಬಳಿ ಹಲವರಿಗೆ ನೀಡಿದ್ದ 48 ಬೇನಾಮಿ ಸೈಟ್​ಗಳನ್ನು ಇಡಿ ಮುಟ್ಟುಗೋಲು ಹಾಕಿದೆ.

ಇನ್ನು ನಗರದ ಹೃದಯ ಭಾಗದಲ್ಲೇ ಮುಡಾ ಕೈತಪ್ಪಿ ಹೋಗುತ್ತಿದ್ದ ಜಾಗವನ್ನು ಇ.ಡಿ ಸೀಜ್ ಮಾಡಿದೆ. ಕುವೆಂಪು ನಗರ, ದಟ್ಟಗಳ್ಳಿ, ಆಂದೋಲನ ವೃತ್ತ, ವಿಜಯ ನಗರ, ಜೆ.ಪಿ.ನಗರ, ದೇವನೂರು ಬಡಾವಣೆ ಆರ್.ಟಿ.ನಗರಗಳಲ್ಲಿ ಬೇನಾಮಿಯಾಗಿ ಸೈಟ್‌ಗಳು ನೀಡಲಾಗಿತ್ತು. ಇವುಗಳಲಿಂದಲೇ ಮುಡಾಗೆ ಸುಮಾರು 500 ಕೋಟಿ ರೂ ನಷ್ಟ ಆಗಿದೆ ಎನ್ನಲಾಗಿದೆ. ಸದ್ಯ ಪಟ್ಟಿಯಲ್ಲಿರುವ ಯಾವುದೇ ನಿವೇಶನದ ಪರಭಾರೆ ಮಾಡದಂತೆ ತಡೆ‌ ನೀಡಲಾಗಿದೆ.

 

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss