- Advertisement -
www.karnatakatv.net: ರಾಜಕೀಯ- ಬೆಂಗಳೂರು: ಮುಂಬರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಜೆಡಿಎಸ್‌ಗೆ ಇಂದು ವಿವಿಧ ಪಕ್ಷಗಳ ನೂರಾರು ಮುಖಂಡರು ಪಕ್ಷಕ್ಕೆ ಸೇರ್ಪಡೆಯಾದ್ರು. ಬೆಂಗಳೂರಿನ ಜೆಪಿ ಭವನದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆಯಾಗಿರುವ ನಿಯಾಜ್ ಶೇಖ್ ನೇತೃತ್ವದ 300ಕ್ಕೂ ಹೆಚ್ಚು ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಬೆಂಡೆಪ್ಪ ಕಾಶಂಪೂರ್ ಮತ್ತಿತರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಪಕ್ಷಕ್ಕೆ ಸೇರ್ಪಡೆಯಾದ ಎಲ್ಲರಿಗೂ ಬಾವುಟ ಹಾಗೂ ಶಾಲೂ ಹೊದಿಸಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯ್ತು.
- Advertisement -