Thursday, August 21, 2025

Latest Posts

ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ. ನೆರವು- ಆಪ್ ಭರವಸೆ

- Advertisement -

www.karnatakatv.net :2022 ರ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಸ್ಥಳೀಯರಿಗೆ ಖಾಸಗಿ ಕ್ಷೇತ್ರ ಸೇರಿದಂತೆ  ಶೇ .80 ರಷ್ಟು ಉದ್ಯೋಗಗಳನ್ನು ಮೀಸಲಿಡುತ್ತೇವೆ ಅಂತ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ಗೋವಾದಲ್ಲಿ ಪ್ರತಿ ಕುಟುಂಬದ ಒಬ್ಬ ನಿರುದ್ಯೋಗಿ ಸದಸ್ಯರಿಗೆ ಸರ್ಕಾರಿ ಉದ್ಯೋಗ ಮತ್ತು ನಿರುದ್ಯೋಗಿ ಯುವಕರಿಗೆ ಕೆಲಸ ಸಿಗೋವರೆಗೂ ಮಾಸಿಕ 3,000 ರೂಪಾಯಿ ನೀಡುತ್ತೇವೆ ಅಂತ ಕೇಜ್ರಿವಾಲ್ ಇದೇ ವೇಳೆ ತಿಳಿಸಿದ್ರು. 

ಕಳೆದ ಜುಲೈ ತಿಂಗಳಿನಲ್ಲಿ ಗೋವಾಗೆ ಭೇಟಿ ನೀಡಿದ ವೇಳೆ ದೆಹಲಿ ಸಿಎಂ ಕೇಜ್ರಿವಾಲ್, ಗೋವಾದಲ್ಲಿ ತಮ್ಮ ಪಕ್ಷ ಸರ್ಕಾರ ರಚಿಸಿದರೆ ತಿಂಗಳಿಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ತಿಳಿಸಿದ್ರು.

- Advertisement -

Latest Posts

Don't Miss