Sunday, April 13, 2025

Latest Posts

31 ನಕ್ಸಲರು ಎನ್ ಕೌಂಟರ್ ಗೆ ಬಲಿ! 2026 ಕ್ಕೆ ಭಾರತ ನಕ್ಸಲ್ ಮುಕ್ತ : ಶಾ

- Advertisement -

 

chhattisgarh : ಛತ್ತೀಸ್ ಗಡದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 31 ನಕ್ಸಲರು ಹತ್ಯೆಯಾಗಿದ್ದಾರೆ. ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆಯೊಂದಿಗೆ, ಈ ವರ್ಷ ಇದುವರೆಗೆ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 81 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಬೆಳಗ್ಗೆ ವಿವಿಧ ಭದ್ರತಾ ಪಡೆಗಳು ನಡೆಸಿದ ಜಂಟಿ ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದೆ. ಎನ್‌ಕೌಂಟರ್‌ನಲ್ಲಿ ಮೂವತ್ತೊಂದು ನಕ್ಸಲರು ಹತರಾಗಿದ್ದಾರೆ ಎಂದು ಬಸ್ತಾರ್ ರೇಂಜ್‌ನ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ತಿಳಿಸಿದ್ದಾರೆ.

ಇನ್ನು ಸ್ಥಳದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ಗಾಯಗೊಂಡಿರುವ ಇಬ್ಬರು ಯೋಧರು ಅಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆಗಾಗಿ ಅವರನ್ನು ಏರ್ ಲಿಫ್ಟ್ ಮಾಡಲಾಗಿದೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಆಧಿಕಾರಿಗಳು ಹೇಳಿದ್ದಾರೆ. ಕಳೆದ ವರ್ಷ, ಛತ್ತೀಸಗಢದಲ್ಲಿ ಭದ್ರತಾ ಪಡೆಗಳು ಪ್ರತ್ಯೇಕ ಎನ್‌ಕೌಂಟರ್‌ ನಲ್ಲಿ ಒಟ್ಟು 219 ನಕ್ಸಲರ ಕಾರ್ಯ ಚಟುವಟಿಕೆಯನ್ನು ತಟಸ್ಥಗೊಳಿಸಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಈ ನಕ್ಸಲ್ ಎನ್‌ಕೌಂಟರ್‌ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, 2026 ಕ್ಕೆ ದೇಶದಲ್ಲಿ ನಕ್ಸಲಿಸಂ ಅಂತ್ಯ ಆಗುತ್ತೆ . 2026 ಮಾರ್ಚ್ 31 ರ ಮೊದಲು ನಾವು ದೇಶದಿಂದ ನಕ್ಸಲಿಸಂ ನನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುತ್ತೇವೆ. ಇದರಿಂದ ದೇಶನ ನಾಗರಿಕರು ಪ್ರಾಣ ಕಳೆದುಕೂಳ್ಳುಬಾರದು ಎನ್ನುವ ನನ್ನ ಸಂಕಲ್ಪವನ್ನು ಪುನರುಚ್ಚರಿಸುತ್ತೇನೆ. ದೇಶವನ್ನು ನಕ್ಸಲಿಸಂ ಮುಕ್ತಗೊಳಿಸುವ ನಿಟ್ಟಿನಲ್ಲಿ ರಕ್ಷಣಾ ಪಡೆಗಳು ಬಹುದೊಡ್ಡ ಯಶಸ್ಸು ಪಡೆದಿವೆ ಎಂದು ಶಾ ಹೇಳಿದ್ದಾರೆ.

- Advertisement -

Latest Posts

Don't Miss