Friday, March 14, 2025

Latest Posts

ರಾಜ್ಯದ 31ನೇ ಜಿಲ್ಲೆ ವಿಜಯನಗರದಲ್ಲಿ ಸಂಭ್ರಮ…!

- Advertisement -

www.karnatakatv.net : ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಹೊರಹೊಮ್ಮಿದೆ. ಹೊಸ ಜಿಲ್ಲೆಯ 6 ತಾಲೂಕುಗಳಾದ ಹೊಸಪೇಟೆ, ಹೂವಿನಹಡಗಲಿ, ಹರಪನಹಳ್ಳಿ, ಕೊಟ್ಟೂರು, ಕೂಡ್ಲಿಗಿ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆಗೆ . ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರೋ ಕಾರ್ಯಕ್ರಮಗಳಿಗೆ  ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಇಂದು ಮತ್ತು ನಾಳೆ ನೂತನ ಜಿಲ್ಲೆಯಲ್ಲಿ ಉತ್ಸವ ನಡೆಯಲಿದೆ.

ಇನ್ನು ಈ ಕಾರ್ಯಕ್ರಮದಲ್ಲಿ ವಿಜಯನಗರದ ಗತ ವೈಭವ ಬಿಂಬಿಸೋ ರೀತಿ ಶ್ರೀವಿದ್ಯಾರಣ್ಯ ವೇದಿಕೆ ನಿರ್ಮಿಸಲಾಗಿದೆ. ಮಾತಂಗ ಪರ್ವತದ ವಿಹಂಗಮ ನೋಟ ಹಾಗೂ ಶ್ರೀವಿರೂಪಾಕ್ಷೇಶ್ವರ ದೇಗುಲದ 60 ಅಡಿ ರಾಜ ಗೋಪುರವನ್ನು ವೇದಿಕೆಯಲ್ಲಿಸಲಾಗಿದೆ. ಅಷ್ಟೇ ಅಲ್ಲದೆ ಹಂಪಿಯ ಕಲ್ಲಿನರಥ, ಉಗ್ರನರಸಿಂಹ ವಿನ್ಯಾಸವನ್ನು ಕಲಾವಿದರು ರಚಿಸಿದ್ದು, ಮಹಾನವಮಿ ದಿಬ್ಬದ ಮಾದರಿಯಲ್ಲಿ ವೇದಿಕೆಯ ಆಸನದ ವ್ಯವಸ್ಥೆ ಮಾಡಲಾಗಿದೆ.

ಇನ್ನು ಈ ಕಾರ್ಯಕ್ರಮವನ್ನು ಇಡೀ ಜಿಲ್ಲೆಯ ಜನ ಕಣ್ತುಂಬಿಕೊಳ್ಳಲು ಅನುವಾಗುವಂತೆ ಆರು ತಾಲೂಕು ಕೇಂದ್ರಗಳಲ್ಲೂ ಎಲ್‌ಇಡಿ ಪರದೆ ವ್ಯವಸ್ಥೆ ಮಾಡಲಾಗಿದೆ.

- Advertisement -

Latest Posts

Don't Miss