www.karnatakatv.net : ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಉರುಳಿ ಬಿದ್ದು 32 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದಲ್ಲಿ ನಡೆದಿದೆ.
ಹೌದು.. ನೇಪಾಳದ ಮುಗು ಜಿಲ್ಲೆಯ ಗಮಗಧಿಗೆ ತೆರಳುತ್ತಿದ್ದ ಬಸ್ ಉರುಳಿಬಿದ್ದಿದೆ. ವಿಜಯ ದಶಮಿಗೆ ತಮ್ಮ ತಮ್ಮ ಊರಿಗೆ ತೆರಳುತ್ತಿದ್ದ ಪ್ರಯಾಣಿಕರು ಈ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು, ನೇಪಾಳದ ಸೇನೆಯ ಹೆಲಿಕಾಪ್ಟರ್ ಮೂಲಕ ಸುರಖೇಟಿನಿಂದ ಅಪಘಾತ ನಡೆದ ಸ್ಥಳ ತಲುಪಿ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ಹಾಗೇ 22 ಮಂದಿ ಸ್ಥಳದಲ್ಲೆ ಸಾವನ್ನಪಿದರೆ 10 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಕರ್ಣಾಲಿ ಪ್ರಾಂತ್ಯದ ಪೊಲೀಸ್ ಜೀವನ್ ಲಮಿಚನೆ ಅವರು ಹೇಳಿದ್ದಾರೆ. ಈ ಬಸ್ ನಲ್ಲಿ 39 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬ್ರೇಕ್ ಫೇಲ್ ಆಗಿದ್ದರಿಂದ ಈ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗುತ್ತಿದೆ ಹಾಗೇ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ.