ಬೆಂಗಳೂರು: ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಶೀಘ್ರವೇ 346 ಸುಸಜ್ಜಿತ ವಸತಿ ಕೊಠಡಿಗಳು ಸಿದ್ದವಾಗಲಿವೆ ಎಂದು ಬಿಡಿಎ ಅಧ್ಯಕ್ಷರೂ ಮತ್ತು ತಿರುಪತಿ ತಿರುಮಲ ಮಂಡಳಿಯ ಸದಸ್ಯ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.
ತಿರುಪತಿ ತಿರುಮಲದಲ್ಲಿ ರಾಜ್ಯ ಸರ್ಕಾರದಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ತಿರುಮಲದಲ್ಲಿ ಕರ್ನಾಟಕದ ಭಕ್ತಾಧಿಗಳು ಬಂದು ವಾಸ್ತವ್ಯ ಹೂಡಲು ಸೌಲಭ್ಯಗಳು ಅಷ್ಟಾಗಿ ಇರಲಿಲ್ಲ. ಜೊತೆಗೆ ರಾಜ್ಯಕ್ಕೆ ಸೇರಿದ ಸುಮರು ಏಳು ಏಕರೆ ಜಾಗದ ಪ್ರಕರಣ ಕೂಡಾ ನ್ಯಾಯದಲ್ಲಿತ್ತು. ಅದೆಲ್ಲವನ್ನೂ ಈಗ ಸರಿಪಡಿಸಿ ಭಕ್ತಾಧಿಗಳಿಗೆ ಅನುಕೂಲವಾಗುವಂತೆ ಸುಸಜ್ಜಿತ ಕೊಠಡಿಗಳು ಹಾಗೂ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದಿದ್ದಾರೆ.
ಕರ್ನಾಟಕ ಭವನ, ನವೀಕರಣ, ವಸತಿಗೃಹಗಳ ನಿರ್ಮಾಣ ಸೇರಿದಂತೆ ಒಟ್ಟಾರೆ ಸುಮಾರು 236 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಒಟ್ಟು 346 ನಿಲಯಗಳನ್ನು ನಿರ್ಮಿಸಲಾಗುತ್ತಿದೆ. ವಿವಿಧ ಕಾರಣಗಳಿಂದ ಇಲ್ಲಿ ಅಭಿವೃದ್ದಿ ಕೆಲಸಗಳನ್ನು ನಡೆಸಲು ಆಗುತ್ತಿರಲಿಲ್ಲ ಎಂದು ಹೇಳಿದರು.
ತಿರುಮಲಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಇತ್ತೀಚೆಗೆ ಸಿಎಂ ಬಸವರಾಜ ಬೊಮ್ಮಯಿ ಸೂಚಿಸಿದ್ದರು. ಹೀಗಗಿ ಮುಂದಿನ ಫೆಬ್ರವರಿಯ ವೇಳೆಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣ ಗೊಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದರು. ತಿರುಪತಿಗೆ ದಿನಕ್ಕೆ ಲಕ್ಷಾಂತರ ಭಕ್ತಾಧಿಗಳು ಬರುತ್ತಾರೆ. ಯೋಜನೆ ಪೂರ್ಣಗೊಂಡರೆ ರಾಜ್ಯದಿಂದ ಬರುವ ಯಾತ್ರಾರ್ಥಿಗಳಲ್ಲಿ ಏಕಕಾಲಕ್ಕೆ ಒಂದೂವರೆ ಸಾವಿರಕ್ಕೂ ಹೆಚ್ಚು ಜನರಿಗೆ ರಾಜ್ಯ ಸರ್ಕಾರದಿಂದ ವಸತಿ ಸೌಲಭ್ಯ ಕಲ್ಪಿಸಬಹುದು.
ಹೀಗಾಗಿ ರಾಜ್ಯ ಸರ್ಕಾರ ಈಗ ತಕ್ಷಣಕ್ಕೆ 100 ಕೋಟಿ ರೂ. ಬಿಡುಗಡೆ ಮಾಡುತ್ತಿದ್ದು, ಉಳಿದ ಅನುದಾನವನ್ನು ಹಂತ ಹಂತವಾಗಿ ನೀಡಲಿದೆ. ಹಾಗಾಗಿ ತಿರುಮಲದಲ್ಲಿ ಕೈಗೊಳ್ಳುತ್ತಿರುವ ಅಭಿವೃದ್ದಿ ಕಾಮಗಾರಿಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದರು.