- Advertisement -
ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅತಿ ವೇಗವಾಗಿ ಚಲಿಸುತ್ತಿದ್ದ ಸ್ವಿಫ್ಟ್ ಕಾರು ಅಲ್ಲಿಯೇ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಕಿರಣ್ ಅಶೋಕ್, ಜಯದೇವ್ ಮತ್ತು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಮೃತರೆಲ್ಲರೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ.ಮದ್ದೂರು ತಾಲೂಕಿನ ಕೊಪ್ಪ ವೃತ್ತದ ಬಳಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
- Advertisement -