www.karnatakatv.net: ಕಾoಗ್ರೆಸ್ ಪಕ್ಷದಿಂದ ಶೇ. 40 ರಷ್ಟು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ.
ದೇಶದ ರಾಜಕೀಯದಲ್ಲಿ ಮಹಿಳೆಯರು ಪೂರ್ಣ ಪ್ರಮಾಣದ ಪಾಲುದಾರರಾಗಬೇಕು ಎಂದು ನಾವು ಬಯಸುತ್ತೇವೆ, ನಾನು ಇಂದು ನಮ್ಮ ಮೊದಲ ಭರವಸೆಯ ಬಗ್ಗೆ ಮಾತನಾಡಲಿದ್ದೇನೆ ಮುಂದೇ ನಡೆಯುವಂತಹ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಶೇ 40 ರಷ್ಟು ಟಿಕೆಟ್ ನೀಡಲಿದೆ ಎಂದು ನಾವು ನಿರ್ಧರಿಸಿದ್ದೇವೆ ಎಂದು ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶದ ಲಕ್ನೋದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.
” ನವೆಂಬರ್ 15ರವರೆಗೆ ಮಹಿಳೆಯರಿಗೆ ಅವಕಾಶವಿರುತ್ತದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸುವ ಯಾವುದೇ ಮಹಿಳೆಯರು ಕಾಂಗ್ರೆಸ್ ಪಕ್ಷದ ಕಚೇರಿಗೆ ಬಂದು ಭೇಟಿ ಮಾಡಬಹುದು ಎಂದು ಪ್ರಿಯಾಂಕಾ ಗಾಂಧಿ ಆಹ್ವಾನ ನೀಡಿದ್ದಲ್ಲದೆ, ಮಹಿಳಾ ನಾಯಕರಿಗೆ ಅವರ ಸಾಮರ್ಥ್ಯ ಮತ್ತು ಕ್ಷೇತ್ರದಲ್ಲಿ ಅವರು ಮಾಡಿದ ಅಭಿವೃದ್ಧಿ ಕೆಲಸಗಳ ಆಧಾರದ ಮೇಲೆ ಅವಕಾಶಗಳನ್ನು ನೀಡಲಾಗುವುದು,” ಎಂದು ತಿಳಿಸಿದ್ದಾರೆ.