ಕೆ ಆರ್ ಪೇಟೆ ತಾಲೂಕಿನ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳ ಮೂಲಕ ಆಯ್ಕೆಯಾಗಬೇಕಾಗಿರುವ ಎ.ತರಗತಿಯ 6ಸ್ಥಾನಗಳಿಗೆ ಒಟ್ಟು 41 ನಾಮಪತ್ರಗಳು ಸಲ್ಲಿಕೆಯಾಗಿವೆ ಎ.ತರಗತಿಯ 6ಸ್ಥಾನಗಳಿಗೆ 13 ನಾಮಪತ್ರಗಳು, ಬಿ.ತರಗತಿಯ 8ಸ್ಥಾನಗಳಿಗೆ 27 ನಾಮಪತ್ರಗಳು ಸಲ್ಲಿಕೆಯಾಗಿವೆ. 14 ಮಂದಿ ನಿರ್ದೇಶಕರ ಆಯ್ಕೆಗೆ ಇದೇ 28ರಂದು ಚುನಾವಣೆ ನಡೆಯಲಿದೆ ಎಂದು ಟಿಎಪಿಸಿಎಂಎಸ್ ಚುನಾವಣಾಧಿಕಾರಿ ತಹಶೀಲ್ದಾರ್ ಎಸ್.ಯು.ಅಶೋಕ್ ತಿಳಿಸಿದ್ದಾರೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳ ಮೂಲಕ ಆಯ್ಕೆಯಾಗಬೇಕಾಗಿರುವ ಎ.ತರಗತಿಯ 6ಸ್ಥಾನಗಳಿಗೆ ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರಗಳನ್ನು ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಸಲ್ಲಿಸಿದರು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ನೇತೃತ್ವದಲ್ಲಿ ಸಲ್ಲಿಸಿದರು.
ರೈತರು ಮತ್ತು ಕೃಷಿ ಸದಸ್ಯರಿಂದ ಬಿ- ತರಗತಿಯ 8 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಬೆಂಬಲಿತ ಅಭ್ಯರ್ಥಿಗಳು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಸಹ ಚುನಾವಣಾಧಿಕಾರಿಯಾಗಿ ತಾಲ್ಲೂಕು ಚುನಾವಣಾ ಶಾಖೆಯ ಶಿರಸ್ತೇದಾರ್ ಕೆ.ಎಸ್.ಹರೀಶ್, ಟಿಎಪಿಸಿಎಂಎಸ್ ಸಂಸ್ಥೆಯ ಕಾರ್ಯದರ್ಶಿ ಎಸ್.ಬೋರೇಗೌಡ, ರವಿಕುಮಾರ್ ಭಾಗವಹಿಸಿದ್ದರು.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ